ಜಿಲ್ಲಾಡಳಿತದಿಂದ ಸಂಭ್ರಮದ ಶ್ರೀ ಕೃಷ್ಣ ಜಯಂತಿ ಆಚರಣೆ

0
76

BP NEWS: ಬಳ್ಳಾರಿ: ಸೆಪ್ಟೆಂಬರ್.06:
ಮಹಾಭಾರತ ಯುದ್ದದಲ್ಲಿ ಅರ್ಜುನನಿಗೆ ದಾರಿ ತೋರಿಸಿದಂತೆ ನಿಮ್ಮ ಜೀವನದಲ್ಲಿಯೂ ಶ್ರೀಕೃಷ್ಣನು ದಾರಿ ತೋರಲಿ, ನಿಮ್ಮ ಬದುಕನ್ನು ಸುಖಮಯವನ್ನಾಗಿಸಲಿ ಎಂದು ಮಹಾನಗರ ಪಾಲಿಕೆಯ ಮೇಯರ್ ಡಿ.ತ್ರಿವೇಣಿ ಅವರು ಶ್ರೀ ಕೃಷ್ಣ ಜಯಂತಿ ನಿಮಿತ್ತ ಶುಭಾಷಯ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಮಹಾನಗರ ಪಾಲಿಕೆಯ ಉಪ ಮೇಯರ್ ಜಾನಕಿ ಅವರು ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿಯು ಭಾರತ ಹಾಗೂ ಇತರೆ ವಿದೇಶಿಗಳಲ್ಲಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದು. ಅತ್ಯಂತ ಶ್ರದ್ಧಾ ಭಕ್ತಿಯಿಂದ ಬಾಲಕೃಷ್ಣನ ಜನ್ಮದಿನವನ್ನು ಆಚರಿಸಿ ಖುಷಿಪಡುತ್ತಾರೆ. ಈ ಹಬ್ಬವನ್ನು ಗೋಕುಲಾಷ್ಟಮಿ ಎಂದೂ ಕರೆಯಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ಅವರು ವಿಶೇಷ ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಯಾದವ ಸಮಾಜದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಯಿ ಶೃತಿ ಮತ್ತು ಅವರ ತಂಡದಿಂದ ಭಕ್ತಿಗೀತೆಗಳನ್ನು ಪ್ರಸ್ತುತ ಪಡಿಸಿದರು.
ಗಮನ ಸೆಳೆದ ಸಾಂಸ್ಕøತಿಕ ಕಲಾ ತಂಡಗಳು:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತ್ಯೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ ಕುಣಿತ ಹಾಗೂ ತಾಷೆ ರಂಡೋಲ್ ಸೇರಿದಂತೆ ಸಾಂಸ್ಕøತಿಕ ಕಲಾ ತಂಡಗಳು ನೋಡುಗರನ್ನು ಗಮನಸೆಳೆದವು.


ಮೆರವಣಿಗೆಯು ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನ ಮುಂಭಾಗದ ಆವರಣದಿಂದ ಆರಂಭವಾಯಿತು. ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಹಾಗೂ ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಪಿ.ಗಾದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.


ಮೆರವಣಿಗೆಯು ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ಸಾಗಿತು.

LEAVE A REPLY

Please enter your comment!
Please enter your name here