ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ

0
59

BP NEWS: ಬಳ್ಳಾರಿ: ಸೆಪ್ಟೆಂಬರ್.17:
ಪುರಾಣಗಳಲ್ಲಿ ಶಿವನನ್ನು ವಿಶ್ವಕರ್ಮನೆಂದು ವರ್ಣಿಸಲಾಗುತ್ತದೆ. ವಿಶ್ವಕರ್ಮರು ಕರ್ಮಮಾರ್ಗಗಳನ್ನು ಕಂಡುಕೊಂಡವರಾಗಿದ್ದಾರೆ ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ವಿಶ್ವಕರ್ಮನೆಂದರೆ ಕೇವಲ ನಾಮ–ರೂಪಗಳಲ್ಲ; ಅದೊಂದು ಸಕರ್ಮಕ ತತ್ವ ಮತ್ತು ಕರ್ತವ್ಯಗಳನ್ನು ನಿಯಮಿಸಿದ ವಿಶ್ವಕರ್ಮರು. ಅವರ ಸಮಾಜದ ಅಭಿವೃದ್ಧಿಗೆ ಬೇಕಾದ ಸೌಲಭ್ಯಗಳನ್ನು ನಮ್ಮ ಸರ್ಕಾರದಿಂದ ಕಲ್ಪಿಸಲಾಗುವುದು ಎಂದು ಹೇಳಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕರ್ಮ ಸಮಾಜದವರು ತಮ್ಮ ಕೌಶಲ್ಯತೆಯಿಂದ ಸಣ್ಣ-ಪುಟ್ಟ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಕೌಶಲ್ಯತೆ ಮತ್ತು ಅಚ್ಚು-ಕಟ್ಟಿನ ಕಾಯಕದಿಂದ ಹಲವಾರು ರಂಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ ಅವರು, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಆ ಸಮಾಜದವರು ಸಬಲರಾಗಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಉಪ ಮೇಯರ್ ಜಾನಕಿ ಅವರು ಮಾತನಾಡಿ, ಬಹ್ಮ, ವಿಷ್ಣುವಿನ ಸುದರ್ಶನ ಚಕ್ರ, ಶಿವನ ತ್ರಿಶೂಲ ಸೇರಿದಂತೆ ಹಲವು ಆಯುಧಗಳು ಹಾಗೂ ಪರಿಕರಗಳನ್ನು ಸೃಷ್ಟಿಸಿದವರು ವಿಶ್ವಕರ್ಮ ಅವರು ಎಂದು ಹೇಳಿದರು.


ಧಾರವಾಡ ನಿವೃತ್ತ ಜಿಲ್ಲಾ ವಾರ್ತಾಧಿಕಾರಿ ಸಿ.ಪಿ.ಮಾಯಾಚಾರಿ ಅವರು ವಿಶ್ವಕರ್ಮ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.


ಗಮನ ಸೆಳೆದ ಸಾಂಸ್ಕøತಿಕ ಕಲಾ ತಂಡಗಳು:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ಕುಣಿತ ಹಾಗೂ ತಾಷೆ ರಂಡೋಲ್ ಸೇರಿದಂತೆ ಸಾಂಸ್ಕøತಿಕ ಕಲಾ ತಂಡಗಳು ನೋಡುಗರನ್ನು ಗಮನಸೆಳೆದವು.
ಜಯಂತಿಯ ಮೆರವಣಿಗೆಯು ನಗರದ ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಬೆಂಗಳೂರು ರಸ್ತೆಯ ಹಳೇ ಬ್ರೂಸ್‍ಪೇಟೆ ಪೋಲೀಸ್ ಠಾಣೆ ಮುಂಭಾಗದಿಂದ ಹೆಚ್.ಆರ್ ಗವಿಯಪ್ಪ ವೃತ್ತ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಪುಟ್ ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗೆ ಸಾಗಿ ಬಂದಿತು.

LEAVE A REPLY

Please enter your comment!
Please enter your name here