BP NEWS: ಬಳ್ಳಾರಿ: ಸೆಪ್ಟೆಂಬರ್.25:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 135ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸೆ.26ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ಗೃಹರಕ್ಷಕದಳದ ಕಚೇರಿ ಪಕ್ಕದಲ್ಲಿನ ಗುರುಭವನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯುವ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಹಾಗೂ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ಎ.ಹನುಮಕ್ಕ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಇನ್ನಿತರ ಆಧಿಕಾರಿಗಳು ಉಪಸ್ಥಿತರಿರಲಿದ್ದಾರೆ.