BP NEWS: ಬಳ್ಳಾರಿ: ಸೆಪ್ಟೆಂಬರ್.30: ಬಳ್ಳಾರಿಯಲ್ಲಿ ಶ್ರೀರಾಮ ರಾಜು ಫೌಂಡೇಶನ್ ಹಾಗೂ ಸ್ವಾಮಿ ವಿವೇಕಾನಂದ ರಕ್ತ ಕೇಂದ್ರ ಇವರ ಸಹಯೋಗದಲ್ಲಿಅಕ್ಟೋಬರ್ 2, ಸೋಮುವಾರದಂದು ಗಾಂಧಿ ಜಯಂತಿ ಪ್ರಯುಕ್ತ ‘ಬೃಹತ್ ರಕ್ತದಾನ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 2, ಸೋಮುವಾರದಂದು ಗಾಂಧಿ ಜಯಂತಿ ಪ್ರಯುಕ್ತ ‘ಬೃಹತ್ ರಕ್ತದಾನ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಷಯ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮ ರಾಜು ಫೌಂಡೇಷನ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀರಾಮ ರಾಜು ಅವರು ಮಾತನಾಡಿ ಸಂಗನಕಲ್ಲು ರಸ್ತೆಯಲ್ಲಿರುವ ಕೆ.ಆರ್.ಎಸ್ ಫಂಕ್ಷನ್‌ಹಾಲ್ ನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು ಸಂಸ್ಥೆಯ ಬಹು ನಿರೀಕ್ಷೆಯ ಕಾರ್ಯಕ್ರಮ ಇದಾಗಿದೆ, ಸುಮಾರು ಸಾವಿರಕ್ಕೂ ಹೆಚ್ಚು ಜನ ರಕ್ತದಾನ ಮಾಡುವ ನಿರೀಕ್ಷೆ ಇದೆ. ನಮ್ಮ ಫಂಡೇಷನ್ ವತಿಯಿಂದ ಯಾವಾಗಲೂ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಉದ್ದೇಶವನ್ನ ನಾವು ಹೊಂದಿದ್ದೇವೆ, ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಮೊದಲ ಅದ್ಯತೆ ಎಂದರು.
ರಕ್ತದಾನ ಮಾಡುವುದರಿಂದ ದಾನಿಗಳಿಗೆ ಪ್ರಯೋಜನಗಳಿವೆ.
ರಕ್ತದಾನ ಮಾಡುವುದರಿಂದ….
1. ದಾನಿಯ ದೇಹದಲ್ಲಿ ಹೊಸರಕ್ತ ಉತ್ಪತ್ತಿಯಾಗುತ್ತದೆ.
2. ದೇಹದಲ್ಲಿ ಹೊಸ ರಕ್ತಚಲನೆಯಿಂದ ಕಾರ್ಯತತ್ಪರತೆ, ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ.
3. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯಕವಾಗುತ್ತದೆ.
4. ಹೃದಯಾಘಾತವನ್ನು ಶೇ. 80 ಕ್ಕಿಂತಲೂ ಜಾಸ್ತಿ ತಡೆಯಲು ಸಹಾಯವಾಗುತ್ತದೆ.
5. ರಕ್ತದ ಒತ್ತಡ ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.
ರಕ್ತದಾನ ಬರಿ ದಾನವಲ್ಲ, ಅದು ಜೀವದಾನ,
ಜೀವನಗಳನ್ನು ಉಳಿಸಲು
ರಕ್ತದಾನ ಮಾಡುವ ಸಂಕಲ್ಪ ಮಾಡೋಣ.