ಮಹಾತ್ಮ ಗಾಂಧೀಜಿಯವರ 154ನೇ ಜಯಂತ್ಯೋತ್ಸವ ಅ.02ರಂದು

0
100

BP NEWS: ಬಳ್ಳಾರಿ: ಅಕ್ಟೋಬರ್.02:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅ.02ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿ ಅವರ ಬದುಕು/ವಿಚಾರ/ಹೋರಾಟಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗಾಂಧೀಜಿಯವರ 154ನೇ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮತ್ತು ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಆದರ್ಶಗಳ ಕುರಿತು ವಿಶೇಷ ಉಪನ್ಯಾಸವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಗಾಂಧಿಭವನದ ಕಾರ್ಯದರ್ಶಿ ಟಿ.ಜಿ.ವಿಠ್ಠಲ್ ಅವರು, ಮಹಾತ್ಮ ಗಾಂಧೀಜಿ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಇಬ್ರಾಹಿಂಪುರ ಎಸ್.ಎಂ.ಹುಲುಗಪ್ಪ ಮತ್ತು ತಂಡದಿಂದ ಮಹಾತ್ಮ ಗಾಂಧೀಜಿಯವರ ಭಜನಾ ಹಾಡುಗಳ ಕಾರ್ಯಕ್ರಮ ನಡೆಸಿಕೊಡುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here