ಶ್ರೀ ಏಕಲವ್ಯ ಟ್ರಸ್ಟ್ ಬಳ್ಳಾರಿ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

0
77

BP NEWS: ಬಳ್ಳಾರಿ: ನವೆಂಬರ್.10: ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿನ ಏಕಲವ್ಯ ವಸತಿ ಶಾಲೆಯಲ್ಲಿ ಗುರುವಾರ ಶ್ರೀ ಏಕಲವ್ಯ ಟ್ರಸ್ಟ್ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ 2022 -2023ನೇ ಸಾಲಿನಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರಾದ ಹೆಚ್. ಮಲ್ಲಿಕಾರ್ಜುನ ಅವರು ಸಸಿಗೆ ನೀರು ಎರೆದು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ಧಿ ಅಧಿಕಾರಿಗಳಾದ ರಾಮಕೃಷ್ಣ ನಾಯಕ್ ಅವರು ಮಾತನಾಡಿ ಪ್ರತಿ ಮಗು ತನ್ನ ಪ್ರತಿಭೆಯನ್ನು ತೋರಿಸಿದಾಗ ನೈತಿಕ ಮತ್ತು ಸಾಮಾಜಿಕ, ಆರ್ಥಿಕವಾಗಿ ಆ ಮಗುವಿಗೆ ಸಮಾಜದಲ್ಲಿ ಬೆಂಬಲವಾಗಿ ನಿಲ್ಲಬೇಕಾಗುತ್ತದೆ. ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿರುವ ಏಕಲವ್ಯ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಕೆಲಸ ಶ್ಲಾಘನೀಯ ಎಂದರು.

ಈ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸದಲ್ಲಿ ಸಹ ಹೆಚ್ಚಿನ ಅಂಕಗಳನ್ನು ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ತಮ್ಮ ಸಮುದಾಯದ ಮಕ್ಕಳಿಗೆ ಪ್ರೇರಣೆಯಾಗಲಿ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಗಣ್ಯರಿಗೆ ಸನ್ಮಾನ ಮಾಡಲಾಯಿತು
ಈ  ಸಂದರ್ಭದಲ್ಲಿ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರಮೇಶ್ ಹೆಚ್, ಏಕಲವ್ಯ ಟ್ರಸ್ಟ್ ಅವರು ಮುಂದಿನ ದಿನಗಳಲ್ಲಿ ಇತರ ಹಲವಾರು ಕಾರ್ಯಕ್ರಮಗಳು ಮಾಡಬೇಕೆಂದು ಇಚ್ಚೈಸಿದರು , ಏಕಲವ್ಯ ಶಾಲೆಯ ಪ್ರಾಂಶುಪಾಲರಾದ ಮಾರೆಪ್ಪ, ಬಿಇಒ ಕಚೇರಿಯ ಆಫೀಸ್ ವ್ಯವಸ್ಥಾಪಕ ಮೋಹನ್ ಕಿಶೋರ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಅನಸೂಯಾ, ಕೊಟ್ರೇಶ್,ಏರಿಸ್ವಾಮಿ
ಶ್ರೀ ಏಕಲವ್ಯ ಟ್ರಸ್ಟ್ ಅಧ್ಯಕ್ಷರಾದ ಟಿ. ಚಂದ್ರಶೇಖರ್ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮಾಡಲಿಕ್ಕೆ ಅವಕಾಶ ಮಾಡಿಕೊಟ್ಟ ಮಾರಿಯಪ್ಪ ಸಾರ್ ಅವರಿಗೆ ಧನ್ಯವಾದಗಳು ತಿಳಿಸಿದರು,
ಸದಸ್ಯರಾದ  ಪುಷ್ಪಾಲತಾ, ಬಾಲಚಂದ್ರ, ರಾಮಚಂದ್ರ, ಕಲಾವತಿ, ಶೃತಿ, ಭರತ್ ಸೇರಿದಂತೆ ಮತ್ತಿತರು ಇದ್ದರು.

LEAVE A REPLY

Please enter your comment!
Please enter your name here