ಕರ್ನಾಟಕ ಸಂಭ್ರಮ-50ರ ರಥಯಾತ್ರೆಗೆ ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ

0
124

BP NEWS: ಬಳ್ಳಾರಿ: ನವೆಂಬರ್.16:
ಬಳ್ಳಾರಿ ನಗರಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯನ್ನು ಗುರುವಾರ ಅತ್ಯಂತ ಸಂಭ್ರಮ-ಸಡಗರದಿಂದ ಬರ ಮಾಡಿಕೊಳ್ಳಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಮೆರವಣಿಗೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕನ್ನಡ ಬಾವುಟ ಹಾರಿಸುವ ಮೂಲಕ ಸ್ವಾಗತಿಸಿದರು.


ಮೆರವಣಿಗೆಗೆ ಮುನ್ನ ವಿವಿಧ ಜಾನಪದ ನೃತ್ಯ ಕಲಾ ತಂಡಗಳಿಂದ ಕನ್ನಡ ಗಾಯನಗಳಿಗೆ ನೃತ್ಯ ಪ್ರದರ್ಶನ ನೀಡಿದ್ದು ಜನಮನ ಸೆಳೆಯಿತು, ನೋಡುಗರ ಚಪ್ಪಾಳೆಗಳ ನಡುವೆ ಸ್ಥಳೀಯ ಕಲಾವಿದರ ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಕಲಾ ತಂಡಗಳಿಂದ ಭರ್ಜರಿ ಸಂಭ್ರಮದ ಮೆರವಣಿಗೆ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು,

ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಅಬಕಾರಿ ಉಪನಿರೀಕ್ಷಕ ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಮೇಶ್ ಬಾಬು, ತಹಸೀಲ್ದಾರ್ ಗುರುರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಪಾಲಿಕೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.


ಕಣ್ಮನ ಸೆಳೆದ ಕನ್ನಡದ ಧ್ವಜ:
ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಅಂಗವಾಗಿ ಶಾಲಾ ಕಾಲೇಜು ಮಕ್ಕಳ ಕೈಯಲ್ಲಿ 500 ಮೀಟರ್ (ಅರ್ಧ ಕಿ.ಮೀ) ಉದ್ದದ ಕನ್ನಡ ಧ್ವಜದ ಮೆರವಣಿಗೆಯು ನೋಡುಗರನ್ನು ಆಕರ್ಷಿಸಿತು. ಇಂದು ನಗರಕ್ಕೆ ಆಗಮಿಸಿದ ಕನ್ನಡಮ್ಮನ ರಥಯಾತ್ರೆ ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ನೋಂದಣಿ ಕಚೇರಿಯವರೆಗೆ ಸಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಂಗಂ ವೃತ್ತಕ್ಕೆ ಬಂದು ರಾಘವ ಕಲಾ ಮಂದಿರದವರೆಗೆ ಕೊನೆಗೊಂಡಿತು. ನಾಳೆ ನಗರದಿಂದ ಕುರುಗೋಡು ತಾಲ್ಲೂಕಿಗೆ ಪಯಣ ಬೆಳೆಸಲಿದೆ.


ಮೆರವಣಿಗೆಯ ನಂತರ ಸಂಜೆ ರಾಘವ ಕಲಾಮಂದಿರದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ಕನ್ನಡಪರ ಸಂಘಟನೆಗಳ ಸಾರಥ್ಯದಲ್ಲಿ ನಡೆದ ಈ ರಥಯಾತ್ರಗೆ ಶ್ರಮಿಸಿದ ಎಲ್ಲರಿಗೂ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here