ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ

0
124

BP NEWS: ಬಳ್ಳಾರಿ: ಡಿಸೆಂಬರ್.04:
ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುಲೇಖಾ.ಬಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ನಮಗೆಲ್ಲಾ ಸ್ಫೂರ್ತಿಯಾಗಿದ್ದು, ಅವರನ್ನು ಸಮಗ್ರವಾಗಿ ಅರಿಯುವ ಕಾರ್ಯವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಾಡುತ್ತಿದೆ. ಅದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಯಶಸ್ವಿಯಾಗಬೇಕು ಹಾಗೂ ಅವರು ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಕುರಿತು ಡಾ.ಯು.ಶ್ರೀನಿವಾಸ್ ಮೂರ್ತಿ ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕೆ.ಹನುಮೇಶ, ಸೋಮಶೇಖರ್, ಶ್ಯಾಮಣ್ಣ.ಎಸ್, ಚಾಂದ್ ಪಾಷಾ ಸೇರಿದಂತೆ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here