BP NEWS: ಬಳ್ಳಾರಿ: ಡಿಸೆಂಬರ್.22:
ನಗರದ ಹಳೆಯ ಜಿಲ್ಲಾ ನ್ಯಾಯಾಲಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನ್ಯಾಯಾಲಯಗಳು ಸ್ಥಳಾಂತರ ಮಾಡಲಾಗಿದ್ದು, ನಗರದ ತಾಳೂರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಡಿ.26 ರಿಂದ ಕಾರ್ಯ ನಿರ್ವಹಿಸಲಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.
ಪ್ರಧಾನ ಹಿರಿಯ ಸಿವಿಲ್ ಮತ್ತು ಸಿ.ಜೆ.ಎಂ ನ್ಯಾಯಾಲಯ, 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಲಯ, 2ನೇ ಅಪರ ಹಿರಿಯ ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, 1ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, 2ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, 3ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, 4ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, 5ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಸೇರಿದಂತೆ ಡಿ.26ರಿಂದ ನಗರದ ತಾಳೂರು ರಸ್ತೆಯ ನೂತನ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.