ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹುಮುಖ್ಯ: ರಾಮ್‍ಕಿರಣ

0
92

BP NEWS: ಬಳ್ಳಾರಿ: ಜನವರಿ.10:
ನವ ಭಾರತ ನಿರ್ಮಾಣದಲ್ಲಿ ಯುವಕರು ತಮ್ಮನ್ನು ತಾವು ಆರ್ಪಿಸಿಕೊಂಡಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಶ್ರೀಮೇಧಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ರಾಮ್‍ಕಿರಣ ಅವರು ಹೇಳಿದರು.
ಭಾರತ ಸರ್ಕಾರದ ಸ್ಥಾಯಿ ಸಂಸ್ಥೆಯಾದ ನೆಹರು ಯುವ ಕೇಂದ್ರ, ಬಳ್ಳಾರಿ ಮತ್ತು ಶ್ರೀಮೇಧಾ ಪದವಿ ಮಹಾವಿದ್ಯಾಲಯ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶ್ರೀಮೇಧಾ ಪದವಿ ಮಹಾವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನನ್ನ ಭಾರತ್-ವಿಕ್ಷಿತ ಭಾರತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಬಹು ಪ್ರಮುಖವಾಗಿದೆ, ಎಲ್ಲಾ ಧರ್ಮಿಯರ ಸಹಕಾರ, ವಿಶ್ವಾಸ, ನಂಬಿಕೆಯನ್ನು, ಹೊತ್ತು ಮುನ್ನೆಡೆಸಲು ಈಗಿನ ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.
ನೆಹರು ಯುವ ಕೇಂದ್ರದ ಯುವ ಅಧಿಕಾರಿಗಳಾದ ಮೊಂಟು ಪಾತರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ನನ್ನ ಭಾರತದ-ವಿಕ್ಷಿತ ಭಾರತ್ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾಗಿ ಚೇತ್ರ ಪಿ.ವಿ ಅವರು ಪ್ರಥಮ ಸ್ಥಾನ ಪಡೆದರು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here