ಸರ್ಕಾರಿ ನೌಕರರ ಸಂಕ್ರಾಂತಿ ಸಂಭ್ರಮೋತ್ಸವ ಜ.18 ರಂದು

0
63

BP NEWS: ಬಳ್ಳಾರಿ: ಜನವರಿ.16:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಕ್ರಾಂತಿ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಜ.18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ಅವರು ಅಧ್ಯಕ್ಷತೆ ವಹಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಪ್ರತಿಭಾ ಪುರಸ್ಕಾರ ಮಾಡುವರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಪಿ.ಎಸ್.ಷಡಾಕ್ಷರಿ ಅವರು ಗೌರವ ಉಪಸ್ಥಿತಿ ಇರುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತಾ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.


ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಬಳ್ಳಾರಿ ವಲಯ ಪೊಲೀಸ್ ಉಪಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ಹೇಮಂತ್.ಎನ್., ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಡಾ.ಎಸ್.ಸಿದ್ಧರಾಮಣ್ಣ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಬಸವರಾಜ್.ಎಸ್., ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನೆಲ್ಕುದ್ರಿ ಸದಾನಂದ ಸೇರಿದಂತೆ ಇತರರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ, ಜಿ.ಕೆ.ರಾಮಕೃಷ್ಣ, ಜಿಲ್ಲಾ ಖಜಾಂಚಿ ಎಸ್.ಎಂ.ಭದ್ರಯ್ಯ, ಗೌರವಾಧ್ಯಕ್ಷ ಪಿ.ನಾಗರಾಜು, ಕಾರ್ಯಾಧ್ಯಕ್ಷ ಎಂ.ಎ.ಆಸೀಫ್, ಹಿರಿಯ ಉಪಾಧ್ಯಕ್ಷ ಶರಣಬಸಪ್ಪ.ಎಸ್.ಜಿನಿಗಾ, ರಾಜ್ಯ ಸಾಂಸ್ಕøತಿಕ ಕಾರ್ಯದರ್ಶಿ ಡಾ.ಎನ್.ಶ್ರೀನಿವಾಸರೆಡ್ಡಿ, ರಾಜ್ಯ ಜಂಟಿ ಕಾರ್ಯದರ್ಶಿ ಪಿ.ಅಲ್ಲಬಕಾಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತರಾಯ, ರಾಜ್ಯ ಜಂಟಿ ಕಾರ್ಯದರ್ಶಿ ಹರಿಪ್ರಸಾದ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಡಿ.ವಿರೇಶ್ ಕುಮಾರ್, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷ ಎಸ್.ಲಿಂಗರಾಜರೆಡ್ಡಿ, ಸಂಡೂರು ತಾಲ್ಲೂಕು ಅಧ್ಯಕ್ಷ ಚೌಕಳಿ ಪರಶುರಾಮಪ್ಪ, ಕುರುಗೋಡು ತಾಲ್ಲೂಕು ಅಧ್ಯಕ್ಷ ಗುಂಡಪ್ಪನವರ ನಾಗರಾಜ, ಕಂಪ್ಲಿ ತಾಲ್ಲೂಕು ಅಧ್ಯಕ್ಷ ಟಿ.ಗಿರೀಶ್ ಬಾಬು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here