BP NEWS: ಬಳ್ಳಾರಿ: ಮಾರ್ಚ್.18:
ಜಿಲ್ಲೆಯಾದ್ಯಂತ ಮಾ.25 ರಿಂದ ಏ.06 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.
ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.