ಜಿಲ್ಲಾಡಳಿತದಿಂದ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

0
28

BP NEWS Karnataka: ಬಳ್ಳಾರಿ: ಸೆಪ್ಟೆಂಬರ್.11:

ಜಿಲ್ಲಾಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸೆ.17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಕಾರ್ಯಕ್ರಮ ಕುರಿತು ವಿಶೇಷÀ ಉಪನ್ಯಾಸ ನೀಡುವರು.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.