ಬಿಪಿ ನ್ಯೂಸ್: ಬಳ್ಳಾರಿ ನ.21
ಬಳ್ಳಾರಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಹಲವಾರು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಳ್ಳಾರಿ ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಬೆಣಕಲ್ಲು ಗ್ರಾಮದಿಂದ ಬಳ್ಳಾರಿಗೆ ಸರಿಯಾಗಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ, ಇಂದು ಬೆಣಕಲ್ಲಿನ ಎಲ್ಲಾ ವಿದ್ಯಾರ್ಥಿಗಳು ಬಳ್ಳಾರಿ ಜಿಲ್ಲಾಡಳಿತ ಕಛೇರಿಗೆ ತೆರಳಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿ ತ್ರೀವೇಣಿ ಮಾತನಾಡಿ ಸಾರಿಗೆ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ, ಬೆಣಕಲ್ಲು ಗ್ರಾಮದ ಎಲ್ಲಾ ವಿದ್ಯಾರ್ಥಿಗಳು ಸೇರಿ ಜಿಲ್ಲಾ ಕಛೇರಿಗೆ ಬಂದಿದ್ದೇವೆ. ಬಳ್ಳಾರಿ ನಗರದಲ್ಲಿ ಶಾಲಾ ಕಾಲೇಜುಗಳು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಗುವುದರಿಂದ ನಮ್ಮ ಬೆಣಕಲ್ಲು ಗ್ರಾಮಕ್ಕೆ ಸರಿಯಾಗಿ ಬೆಳಿಗ್ಗೆ 7:30ಕ್ಕೆ ಸಾರಿಗೆ ಬಂದರೆ ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ. ಮತ್ತು ನಾವು ನಗರವನ್ನು ತಲುಪಲು ಒಂದು ಗಂಟೆಯ ಸಮಯ ಬೇಕು. ಈಗ ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ನಾವು ಸರಿಯಾಗಿ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಮತ್ತು ಬಳ್ಳಾರಿಯಿಂದ ಬೆಣಕಲ್ಲು ಗ್ರಾಮಕ್ಕೆ ತಡವಾಗಿ ಬರುವುದರಿಂದ ವಿಪರೀತ ಹೊಟ್ಟೆ ಹಸಿವಾಗುತ್ತದೆ ಎಂದರು.
ಹಾಗೂ ಇದರ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಅವರು ಪ್ರತಿಕ್ರಿಯೆ ನೀಡಿದ್ದಕ್ಕಾಗಿ ಇಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಎಂದರು.
ಈ ವೇಳೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೆಣಕಲ್ಲು ಗ್ರಾಮಸ್ಥರು ಜಿಲ್ಲಾಡಳಿತ ಕಛೇರಿ ಮುಂಭಾಗ ಜಮಾಯಿಸಿದ್ದರು.
ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಅವರು ಪ್ರತಿಕ್ರಿಯೆ ನೀಡದೇ ಇರುವುದಕ್ಕೆ, ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ.
– ತ್ರೀವೇಣಿ, ವಿಧ್ಯಾರ್ಥಿನಿ, ಬೆಣಗಲ್ಲು ಗ್ರಾಮ್, ಬಳ್ಳಾರಿ