ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬೀನ್ ಆಯ್ಕೆ!

0
24
Advertisement

ನವದೆಹಲಿ, ಡಿ.15: ಬಿಹಾರ ರಾಜ್ಯ ಸರಕಾರದಲ್ಲಿ ಸಚಿವರಾಗಿರುವ 45 ವರ್ಷ ವಯಸ್ಸಿನ ನಿತಿನ್ ನಬೀನ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರವಿವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿತಿನ್ ನಬೀನ್ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಮೂಲಕ ಹಲವು ತಿಂಗಳುಗಳಿಂದ ಇದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಲವು ಮಂದಿ ಮುಖಂಡರು ನಬೀನ್ ಅವರನ್ನು ಶ್ಲಾಘಿಸಿದ್ದಾರೆ. ಪಕ್ಷದ ನಾಯಕತ್ವ ಸ್ಥಾನದಲ್ಲಿರುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ನಬೀನ್ ಪಾತ್ರರಾಗಿದ್ದಾರೆ.

ನಬೀನ್ ಅವರು ಕಳೆದ 20 ವರ್ಷಗಳಿಂದ ಬಿಜೆಪಿಯಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಬಿಹಾರ ಘಟಕದ ಅಧ್ಯಕ್ಷರಾಗಿ ನಬೀನ್‌ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ನಂತರ ಅದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.‌ 2006ರಲ್ಲಿ ಪಟ್ನಾ (ಪಶ್ಚಿಮ) ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದರು. ಬಳಿಕ ಬಾಂಕಿಪೋರ್‌ ಕ್ಷೇತ್ರದಿಂದ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದಾರೆ. ಪ್ರಸ್ತುತ ಅವರು ಕಾನೂನು ಮತ್ತು ನ್ಯಾಯ, ನಗರಾಭಿವೃದ್ಧಿ ಮತ್ತು ವಸತಿ ಖಾತೆಗಳನ್ನು ಹೊಂದಿದ್ದಾರೆ.

Advertisement

LEAVE A REPLY

Please enter your comment!
Please enter your name here