ರಾಯಚೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಜನಸಂಖ್ಯಾ ದಿನ ಆಚರಣೆ

0
86

BP NEWS: ರಾಯಚೂರು: ಜುಲೈ.11: ಅನಕ್ಷರತೆ ಮತ್ತು ಬಡತನವೇ ಜನಸಂಖ್ಯಾ ಸ್ಪೋಟಕ್ಕೆ ಕಾರಣವಾಗಿದ್ದು, ಹೀಗಾಗಿ ಇವುಗಳನ್ನು ನಿರ್ಮೂಲನೆ ಮಾಡುವ ಮೂಲಕ ಜನಸಂಖ್ಯಾ ಸಮತೋಲನ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಭಾರಿ ಅಧಿಕಾರಿ ಡಾ.ಗಣೇಶ್ ಅವರು ಹೇಳಿದರು.

ಅವರು ಜು.11ರ ಸೋಮವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಒಂದು ದೇಶದ ಪ್ರಗತಿಯಲ್ಲಿ ಜನಸಂಖ್ಯೆಯೂ ಮಹತ್ವ ಸಂಪನ್ಮೂಲವಾಗಿದೆ. ಹೀಗಾಗಿ ಅನಕ್ಷರತೆ ಮತ್ತು ಬಡತನವನ್ನು ನಿರ್ಮೂಲನೆ ಮಾಡುವ ಮೂಲಕ ಜನಸಂಖ್ಯಾ ಸಮತೋಲನ ಕಾಪಾಡಬೇಕಾಗಿದೆ ಎಂದರು.

ಪ್ರಕೃತಿಯ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಜನಸಂಖ್ಯೆ ನಿಯಂತ್ರಿಸುವುದೊAದೇ ಏಕ ಮಾತ್ರ ಮಾರ್ಗವಾಗಿದೆ. ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಮಾತ್ರೆಗಳು ಹಾಗೂ ಚುಚ್ಚು ಮದ್ದುಗಳು ಬಂದಿವೆ. ಅವುಗಳ ಬಗ್ಗೆ ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಜನಸಂಖ್ಯೆ ಇದೇ ವೇಗದಲ್ಲಿ ಹೆಚ್ಚುತ್ತ ಹೋದರೆ ಮುಂದೊAದು ದಿನ ಕುಡಿಯಲು ನೀರು ಹಾಗೂ ಉಸಿರಾಡಲು ಶುದ್ಧ ಗಾಳಿಯೂ ಸಿಗುವುದು ಕಷ್ಟವಾಗಬಹುದು ಎಂದು ಎಚ್ಚರಿಸಿದರು.

ಈ ವೇಳೆ ಕುಟುಂಬ ಕಲ್ಯಾಣಾಧಿಕಾರಿ ಡಾ.ಲಲಿತಾ ಅವರು ಮಾತನಾಡಿ, ಕಡಿಮೆ ವಯಸ್ಸಿನಲ್ಲಿ ಮದುವೆ ಆಗುವುದರಿಂದ ಹೆಚ್ಚು ಮಕ್ಕಳಾಗುತ್ತವೆ. ಮದುವೆ ವಯಸ್ಸು ಮುಂದೆ ಹಾಕಿದರೆ ಕಡಿಮೆ ಮಕ್ಕಳನ್ನು ಪಡೆಯಲು ಸಾಧ್ಯವಾಗುತ್ತದೆ. ಮಹಿಳೆ ಶೈಕ್ಷಣಿಕ ಮತ್ತು ಆರ್ಥಿಕ ಸಬಲರವಾದರೆ ಕುಟುಂಬದ ಗಾತ್ರ ಕಡಿಮೆಯಾಗುತ್ತದೆ ಎಂದು ಹೇಳಿದರು.

1987 ರಿಂದ ವಿಶ್ವ ಜನಸಂಖ್ಯಾ ದಿನ ಆಚರಿಸಲಾಗುತ್ತದೆ. ಪುರುಷರು ಸ್ವಯಂ ಪ್ರೇರಿತರಾಗಿ ಕುಟುಂಬ ಯೋಜನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ ಎಂಬ ಘೋಷದಡಿ ಎಲ್ಲರೂ ಜನ ಸಂಖ್ಯೆ ನಿಯಂತ್ರಣಕ್ಕೆ ಶ್ರಮಿಸೋಣ ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತರಬೇತಿಯ ಪ್ರಾಂಶುಪಾಲ ವೈ.ವೆಂಕಟೇಶ ನಾಯಕ ಅವರು ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಉಪನ್ಯಾಸವನ್ನು ಮಾಡಿದರು.
ಈ ವೇಳೆ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಕುಟುಂಬ ಯೋಜನೆ ಉಪಾಯಗಳನ್ನು ನಮದಾಗಿಸಿ, ಉನ್ನತಿಯ ಹೊಸ ಅಧ್ಯಯನ ಬರೆಯೋಣ ಎಂಬ ಘೋಷವಾಕ್ಯದ ಪೋಸ್ಟರ್ ಗಳನ್ನೂ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಕೆ.ನಾಗರಾಜ್, ಆರ್.ಸಿ.ಎಚ್ ಅಧಿಕಾರಿ ಡಾ.ಎಮ್.ಎನ್.ನಂದಿತಾ, ಡಿ.ಎಲ್.ಒ ಡಾ.ಯಶೋಧ, ರಾಯಚೂರು ತಾಲೂಕು ಆರೋಗ್ಯಾಧಿಕಾರಿ ಡಾ.ಶಕೀರ್, ಮನಶಾಸ್ತçತಜ್ಞ ಡಾ.ಮನೋಹರ ಪತ್ತರ್ ಸೇರಿದಂತೆ ಇತರರು ಆಶಾ ಹಾಗೂ ವಿವಿಧ ಕಾಲೇಜ್ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಇದ್ದರು.

LEAVE A REPLY

Please enter your comment!
Please enter your name here