ರಾಯಚೂರು: ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆ

0
84

BP NEWS: ರಾಯಚೂರು: ಜುಲೈ.12: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ಹಮಿಕೊಂಡ ಹಿನ್ನೆಲೆಯಲ್ಲಿ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜಾರೋಹಣ ಮಾಡುವುದು ದೇಶಾಭಿಮಾನದ ಸಂಕೇತ ಹಾಗೂ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಹೇಳಿದರು.

ಅವರು ಜು.12ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಆ.11ರಿಂದ 17ವರೆಗೆ ಎಲ್ಲ ಸರ್ಕಾರಿ ಕಚೇರಿ, ಮನೆ, ಫೇಸ್ಟುಕ್ ಮಳಿಗೆ ಇತ್ಯಾದಿ ಕಡೆ ಪ್ರತಿ ದಿನ ತ್ರಿವರ್ಣ ಧ್ವಜ ಹಾರಿಸಬೇಕು. ಸ್ವಾತಂತ್ರ‍್ಯ ಹೋರಾಟ, ತ್ಯಾಗ, ಬಲಿದ ಮಾಡಿದವರನ್ನು ಸ್ಮರಿಸಬೇಕು. ಇದರ ಅಂಗವಾಗಿ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ಇಲಾಖೆ, ನಗರ, ಸ್ಥಳೀಯ ಸಂಸ್ಥೆಗಳು ತಮ್ಮ ಅಧೀನ ಕಚೇರಿ ಹಾಗೂ ಸಿಬ್ಬಂದಿ ಮನೆಗಳ ಮೇಲೆ, ಪೊಲೀಸ್ ಠಾಣೆ, ಶಾಲೆಗಳಲ್ಲಿ ರಾಷ್ಟç ಧ್ವಜಾರೋಹಣ ಮಾಡುವಂತೆ ಕ್ರಮ ವಹಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ್ ರಾಜ್ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ಒಕ್ಕೂಟಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರ, ಸಹಕಾರ ಸಂಘಗಳು, ಉಪ ಅಂಚೆ ಕಚೇರಿಗಳಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ರೋಜಾ ಸೇವಕರುಗಳು, ಶಿಕ್ಷಕರುಗಳನ್ನು ಉತ್ತೇಜಿಸಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ರಾಷ್ಟೀಯ ಧ್ವಜವನ್ನು ಹಾರಿಸುವಂತೆ ಸೂಚನೆ ನೀಡಿದರು.

ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕನ್ನಡ ಭಾಷೆಯಲ್ಲಿ ಕರಪತ್ರ, ಸ್ಯಾಂಡೀಸ್, ಬ್ಯಾನರ್ ಇತ್ಯಾದಿಗಳ ಮುಖಾಂತರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಹಲ್ ಗಳು, ಉದ್ಯಾನವನಗಳು, ಹೋಟೆಲ್ ಗಳು, ಅಲ್ಲದೇ ಪ್ರತಿ ಗ್ರಾಮಗಳಲ್ಲಿ ಸಾರ್ವಜನಿಕ ಸಂಪರ್ಕ ಹೊಂದಿರುವ ಕಚೇರಿಗಳ ಮುಂದೆ ಪ್ರಚಾರ ಮಾಡಲು ಸೂಕ್ತ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯಿತಿಗಳು ರಾಷ್ಟ್ರಧ್ವಜವನ್ನು ಬೃಹತ್ ಮಟ್ಟದಲ್ಲಿ ಖರೀದಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲಿ ರಾಷ್ಟ್ರಧ್ವಜಗಳ ಹಂಚಿಕೆ ಮತ್ತು ಮಾರಾಟ ಮಾಡುವ ಸ್ಥಳಗಳನ್ನು ಗುರುತಿಸಬೇಕು. ಅಲ್ಲದೆ ನ್ಯಾಯಬೆಲೆ ಅಂಗಡಿಗಳನ್ನು ಸಹ ಧ್ವಜಗಳ ವಿತರಣೆ ಅಥವಾ ಮಾರಾಟದ ಕೇಂದ್ರವಾಗಿ ಉಪಯೋಗಿಸಿಕೊಳ್ಳಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಲ್ಲೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here