BP News Karnataka Super Fast 16-07-2022

0
208

ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆದೇಶ ನೀಡಿ : ಶಾಸಕ ಜಿ.ಸೋಮಶೇಖರರೆಡ್ಡಿ


BP News  ಬಳ್ಳಾರಿ,ಜು.16-ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆದೇಶ ನೀಡುವಂತೆ ಬಳ್ಳಾರಿ ಮಹಾನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು.
ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀರು ಸರಬರಾಜು, ಒಳ ಚರಂಡಿ, ಡಿ.ಬಿ., ಕೆ.ಯು.ಐ.ಡಿ.ಎಫ್.ಸಿ, 24*7 ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಮೇಯರ್ ರಾಜೇಶ್ವರಿ, ಉಪಮಹಾಪೌರರಾದ ಮಾಲನ್ ಬೀ, ಆಯುಕ್ತರಾದ ರುದ್ರೇಶ್.ಎಸ್.ಎನ್ ಇನ್ನಿತರರು ಇದ್ದರು.
—–
ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ


BP News  ಹೊಸಪೇಟೆ(ವಿಜಯನಗರ),ಜು.16-ವಿಜಯನಗರ ಜಿಲ್ಲೆ ಹೊಸದಾಗಿ ರಚನೆಯಾಗಿದ್ದು, ಜಿಪಂ ಸಿಇಓ ಅವರ ಹಂತದಲ್ಲಿ ಚರ್ಚಿಸಿ ಬಗೆಹರಿಸಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಶ್ರಮಿಸಬೇಕು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಬಿಬಿಎಂಪಿ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಹೇಳಿದರು.
ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಪಂ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
——–
ಕುಡಿತಿನಿ ಶ್ರೀನಿವಾಸ್ ಅವರಿಗೀಗ 50ನೇ ವಸಂತ-ಸಂಭ್ರಮ ಆಚರಣೆಗೆ ಅಭಿಮಾನಿಗಳ ತಯಾರಿ


BP News  ಬಳ್ಳಾರಿ,ಜು.16-ರಾಜಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸದ್ದಿಲ್ಲದೇ 50ನೇ ವಸಂತಕ್ಕೆ ಕಾಲಿರಿಸಿರುವ ಕುಡಿತಿನಿ ಶ್ರೀನಿವಾಸ್ ಅವರ ಜನ್ಮ ದಿನಾಚರಣೆ ಆಚರಿಸಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.
ಜುಲೈ 17ಕ್ಕೆ 50ನೇ ವರ್ಷಕ್ಕೆ ಪದಾರ್ಪಣೆ ಮಾಡಲಿರುವ ಅವರ ಹುಟ್ಟು ಹಬ್ಬ ಆಚರಣೆಗೆ ಅಭಿಮಾನಿಗಳು ನಗರದಾದ್ಯಂತ ಬ್ಯಾನರ್, ಪೋಸ್ಟರ್ ಮತ್ತು ಹೋರ್ಡಿಂಗ್ಸ್‍ಗಳಲ್ಲಿ ನೆಚ್ಚಿನ ನಾಯಕನ ಭಾವಚಿತ್ರದೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳಿದ್ದಾರೆ.
——–
ನಾಗೇನಹಳ್ಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್


BP News  ಹೊಸಪೇಟೆ(ವಿಜಯನಗರ),ಜು.16-ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ ಅವರು ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಿದರು.
ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನೀತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು.
——-
ಎಂ.ರಾಮಸಾಗರ ಗ್ರಾಮದಲ್ಲಿ ದುಮ್ಮಾನಗಳನ್ನು ಆಲಿಸಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ


BP News  ಬಳ್ಳಾರಿ,ಜು.16-ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಸಂಡೂರು ತಾಲೂಕಿನ ತೋರಣಗಲ್ಲು ಹೋಬಳಿಯ ಎಂ.ರಾಮಸಾಗರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನಗಳನ್ನು ಆಲಿಸಿದರು.
ಗ್ರಾಮಸ್ಥರು ಕುಡಿಯುವ ನೀರು, ಚರಂಡಿ, ವಿದ್ಯುತ್, ನಿವೇಶನ, ಬಸ್ ಸೌಕರ್ಯ, ಆಶ್ರಯ ಮನೆಗಳು, ರೇಶನ್ ಕಾರ್ಡ್, ಆಧಾರ್ ತಿದ್ದುಪಡಿ, ಪಟ್ಟಾ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಎದುರು ಪ್ರಸ್ತಾಪಿಸಿದರು.
——–
ಕೋವಿಡ್-19 ಉಚಿತ ಮುನ್ನೆಚ್ಚರಿಕೆ ಡೋಸ್ ತಪ್ಪದೇ ಪಡೆಯಿರಿ: ಡಿಎಚ್‍ಒ ಡಾ.ಜನಾರ್ಧ


BP News ಬಳ್ಳಾರಿ,ಜು.16-ಕೋವಿಡ್ ಸಾಂಕ್ರಮಿಕ ರೋಗ ನಾಲ್ಕನೇ ಹಿನ್ನೆಲೆಯಲ್ಲಿ 18ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಪ್ಪದೇ ಮುನ್ನೆಚ್ಚರಿಕೆ ಡೋಸ್‍ನ್ನು ತಪ್ಪದೇ ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ ಅವರು ತಿಳಿಸಿದರು.
18ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕೆ ಡೋಸ್ ಜಿಲ್ಲಾ ಮಟ್ಟದ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
——-

 

LEAVE A REPLY

Please enter your comment!
Please enter your name here