BP NEWS: ರಾಯಚೂರು: ಜುಲೈ.19: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾಅರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ‘ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಅದರಂತೆ 2021ನೇ ಸಾಲಿನ ಹಿರಿಯ ಕ್ರೀಡಾಪಟು ಅಥವಾ ತರಬೇತುದಾರರಾಗಿ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ನೀಡಲು ಕ್ರೀಡಾಪಟುಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು 2022ರ ಆ.10ರೊಳಗಾಗಿ ವೆಬ್‌ಸೈಟ್ http://sevasindhu.karnataka.gov.in ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.