ಬಳ್ಳಾರಿ: ಜೀವಮಾನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

0
233

BP NEWS: ಬಳ್ಳಾರಿ: ಜುಲೈ.22: 2021-22 ನೇ ಸಾಲಿನ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಯೋಜನೆ ಅಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಕ್ರೀಡಾಪಟು ಅಥವಾ ತರಬೇತುದಾರರಿಗೆ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಈ ಮೂಲಕ ಪ್ರೊತ್ಸಾಹ ನೀಡಲು ಉದ್ದೇಶಿಸಲಾಗಿದೆ.
ಆಸಕ್ತಿ ಉಳ್ಳವರು ಆ.10ರೊಳಗೆ ಪ್ರಸ್ತಾವನೆಯನ್ನು ಆನ್‍ಲೈನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ (https://sevasindhu.karnaaka.gov.in) ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.7899935141ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here