BP NEWS: ಬಳ್ಳಾರಿ: ಆಗಸ್ಟ್.06: ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ನಿರ್ಬಂಧ ವಿಧಿಸಿ ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ
ಬಳ್ಳಾರಿ,ಆ.06(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಿವಿಧ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗಳು ಆ.07ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿಬರ್ಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶವನ್ನು ಹೊರಡಿಸಿದ್ದಾರೆ.
ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಆ.07ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಕಿರಿಯ ಸಹಾಯಕ ಹುದ್ದೆ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮಧ್ಯಾಹ್ನ 02ರಿಂದ ಸಂಜೆ 05ರವರೆಗೆ ಕಿರಿಯ ಸಹಾಯಕರು, ಸಹಾಯಕ ಇಂಜಿನಿಯರ್(ವಿದ್ಯುತ್), ಸಹಾಯಕ ಇಂಜಿನಿಯರ್(ಸಿವಿಲ್), ಕಿರಿಯ ಇಂಜಿನಿಯರ್(ವಿದ್ಯುತ್) ಹಾಗೂ ಕಿರಿಯ ಇಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳೆಂದು ನಿಗದಿಪಡಿಸಲ್ಪಟ್ಟ ಕಟ್ಟಡಗಳ ಸುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಸದರಿ ಪರೀಕ್ಷೆಯಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಹಾಗೂ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತನಲ್ಲಿರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳು ಬೆಳಗ್ಗೆ 09ರಿಂದ ಸಂಜೆ 05.30ರವರೆಗೆ ಕಾರ್ಯನಿರ್ವಹಿಸದಂತೆ ಪ್ರತಿಬಂಧಕ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ನಿಬರ್ಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಹಾಗೂ ಪರೀಕ್ಷೆಗಳ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.