ಸಂಭ್ರಮದ 76ನೇ ಸ್ವಾತಂತ್ರ್ಯ ದಿನಾಚರಣೆ- ನವ ಬಳ್ಳಾರಿ ನಿರ್ಮಾಣಕ್ಕೆ ಬದ್ಧ: ಸಚಿವ ಬಿ.ಶ್ರೀರಾಮುಲು
BP News ಬಳ್ಳಾರಿ,ಆ.15-ಬಳ್ಳಾರಿಯಲ್ಲಿ 76ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ ಜಿಲ್ಲಾಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ವಿವಿಧ ತಂಡಗಳ ಪಥಸಂಚಲನ ವೀಕ್ಷಿಸಿ ಮತ್ತು ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೋತ್ಸವ ಸಂದೇಶ ನೀಡಿದರು. 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
—–
ಗಮನಸೆಳೆದ ದೇಶಭಕ್ತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು
BP News ಬಳ್ಳಾರಿ,ಆ.15- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿ ಅವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ದೇಶಭಕ್ತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ಗಮನಸೆಳೆದವು. ಈ ಸಂದರ್ಭದಲ್ಲಿ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಬಿ.ನಾಗೇಂದ್ರ, ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ,ಬುಡಾ ಅಧ್ಯಕ್ಷ ಪಾಲನ್ನ,ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಎಸ್ಪಿ ಸೈದುಲು ಅಡಾವತ್,
ಇನ್ನಿತರರು ಇದ್ದರು.
—–
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 76ನೇ ಸ್ವಾತಂತ್ರ್ಯ ದಿನ ಆಚರಣೆ
BP News ಬಳ್ಳಾರಿ,ಆ.15-ಬಳ್ಳಾರಿ ಜಿಲ್ಲಾ ನ್ಯಾಯಾಲಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಧ್ವಜಾರೋಹಣಾ ನೇರವೇರಿಸಿದರು. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗದವರು ಇದ್ದರು.
—————
ಹಾಕಿ ಕ್ರೀಡಾಂಗಣ,ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಉದ್ಘಾಟಿಸಿದ ಸಚಿವ ಬಿ.ಶ್ರೀರಾಮುಲು
BP News ಬಳ್ಳಾರಿ,ಆ.15-ಬಳ್ಳಾರಿ ಜಿಲ್ಲಾ ಕ್ರೀಡಾಂಗಣದ ಬಳಿ ಜಿಲ್ಲಾ ಖನಿಜ ನಿಧಿಯ ಮ್ಯಾಕ್ರೋ ಯೋಜನೆ ಅಡಿ ನಿರ್ಮಿಸಲಾಗಿರುವ ಹಾಕಿ ಸಿಂಥಟಿಕ್ ಟರ್ಫ್ ಮೈದಾನವನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಉದ್ಘಾಟಿಸಿದರು.
ಸಕಿಂಕ್ ಮಷೀನ್,ತ್ರಿಚಕ್ರ ಜೆಟ್ಟಿಂಗ್ ಮಶೀನ್, ಸ್ಕಿಡ್ ಲೋಡರ್,ಫಾಗೀಂಗ್ ಮಶೀನ್,ಟ್ರ್ಯಾಕ್ಟರ್ ಜೊತೆಗೆ ಟ್ರೇಲರ್,ಹಿತಾಚಿ ಯಂತ್ರಗಳನ್ನು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ವಿತರಿಸಿ ಸಂಪೂರ್ಣ ಸಿಸಿಟಿವಿ ನಿಗಾದಲ್ಲಿ ಇನ್ಮುಂದೆ ಬಳ್ಳಾರಿ ಇರುತ್ತದೆ ಎಂದರು. ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ, ನಗರದ 26 ಪ್ರಮುಖ ವೃತ್ತಗಳಲ್ಲಿ(ಜಂಕ್ಷನ್) 90 ಅತ್ಯಾಧುನಿಕ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದರು.
—–
ಪ್ರವಾಸೋದ್ಯಮ ಸಚಿವ ಆನಂದಸಿಂಗ್ ರಿಂದ 76ನೇ ಸ್ವಾತಂತ್ರ್ಯೊತ್ಸವ ದಿನ ಆಚರಣೆ
BP News ಹೊಸಪೇಟೆ(ವಿಜಯನಗರ),ಆ.15-76ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ವಿಜಯನಗರ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಧ್ವಜಾರೋಹಣ ನೆರವೇರಿಸಿದರು.
ನಂತರ ವಿವಿಧ ತಂಡಗಳ ಪಥಸಂಚಲನ ವೀಕ್ಷಿಸಿ ಗೌರವ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ, ದೇಶದ ಅತಿ ಎತ್ತರದ(405 ಅಡಿ) ಧ್ವಜಸ್ತಂಭದಡಿಧ್ವಜಾರೋಹಣ: ಭಾರತದ ಸ್ವಾತಂತ್ರ್ಯ ಪಡೆದು 75 ವರ್ಷಗಳನ್ನು ಪೂರೈಸಿರುವ ಈ ಶುಭ ಸಂದರ್ಭದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಹೊಸಪೇಟೆ ನಗರದ ನಗರಸಭಾ ಮೈದಾನದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ಭಾರತದಲ್ಲಿಯೇ ಅತೀ ಎತ್ತರದ(405ಅಡಿ) ಧ್ವಜಸ್ಥಂಭವನ್ನು ಸ್ಥಾಪಿಸಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಾಗಿದೆ ಎಂದರು.
——
ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ವಿಗೆ ತರಬೇತಿ ಅವಶ್ಯ:ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್
BP News ಹೊಸಪೇಟೆ(ವಿಜಯನಗರ)ಆ,15-ವಿದ್ಯಾವಂತ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉದ್ಯೋಗವಕಾಶಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದ್ದು, ಸ್ಪೂರ್ತಿ ಎನ್ನುವ ವಿಶೇಷ ಯೋಜನೆಯ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೇಳಿದರು.
ಇದೇವೇಳೆ ದೇಶವಿಭಜನೆಯ ಘೋರಘಟನೆಗಳ ಛಾಯಾಚಿತ್ರ ಪ್ರದರ್ಶನ ಜರುಗಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಆಯುಕ್ತರು ಹಾಗೂ ಜಿಲ್ಲಾಖನಿಜ ನಿಧಿಯ ವಿಶೇಷಾಧಿಕಾರಿ ಈರಣ್ಣ ಬೀರಾದಾರ, ಹೊಸಪೇಟೆಯ ತಹಶೀಲ್ದಾರ್ ವಿಶ್ವಜಿತ್ ಮೆಹತಾ ಇದ್ದರು.
——