BP NEWS: ಬಳ್ಳಾರಿ: ಆಗಸ್ಟ್.20: ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನೀತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ. ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ ಮತ್ತು ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲವೆಂದು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂದಾಗಬಹುದಾದ ಅನಾನುಕೂಲಗಳನ್ನು ತಪ್ಪಿಸುವ ದೃಷ್ಟಿಯಿಂದ ಪರೀಕ್ಷೆ ಪಡೆಯದಿರುವ ಬಳ್ಳಾರಿ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಪ್ರತಿ ಶನಿವಾರ ಮತ್ತು ಭಾನುವಾರ ನಡೆಯಲಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಡಿ.31ರೊಳಗಾಗಿ ಉತ್ತೀರ್ಣರಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಜಿಲ್ಲಾಧಿಕಾರಿಗಳು ತುರ್ತು ಸಂದೇಶದಲ್ಲಿ ಸೂಚಿಸಿರುತ್ತಾರೆ. ಆ ಮೇರೆಗೆ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಗೂಗಲ್ ಪ್ಲೇ ಸ್ಟೋರ್ ನಲ್ಲಿ “ವೋಟರ್ ಹೆಲ್ಪ್ ಲೈನ್” ಅ್ಯಪ್ ಡೌನ್ ಲೋಡ್ ಮಾಡಿಕೊಂಡು ಆ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬಸ್ತರ ಮತದಾರರ ಗುರುತಿನ ಚೀಟಿಗಳನ್ನು ಸಂಬಂಧಿಸಿದ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.