ಮುಂಡರಗಿ ಆಶ್ರಯ ಬಡಾವಣೆಯಲ್ಲಿ ನೀರು ಸರಬರಾಜು,ಒಳಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಚಾಲನೆ

0
93

BP NEWS: ಬಳ್ಳಾರಿ: ಆಗಸ್ಟ್.24: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಗರದ ಹೊರವಲಯದ ಮುಂಡರಗಿ ಆಶ್ರಯ ಬಡಾವಣೆ(ದಕ್ಷಿಣ ವಲಯ)ಯಲ್ಲಿ 33 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಗೊಳ್ಳಲಾದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಒದಗಿಸುವ ಕಾಮಗಾರಿಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಧವಾರ ಭೂಮಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಯನ್ನು ನಿಗದಿಪಡಿಸಿದ ಅವಧಿಯೊಳಗೆ ಯಾವುದೇ ರೀತಿಯಲ್ಲಿ ಗುಣಮಟ್ಟದಲ್ಲಿ ರಾಜಿಯಾಗದೇ ಅತ್ಯಂತ ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಅವರು ಸೂಚನೆ ನೀಡಿದರು.


ಇದೇ ಸಂದರ್ಭದಲ್ಲಿ ಸಚಿವರು ಮುಂಡರಗಿ ಆಶ್ರಯ ಬಡಾವಣೆ ಪ್ರಗತಿ,ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕುರಿತ ಮಾಹಿತಿಯನ್ನು ಪಡೆದುಕೊಂಡರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ 33 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿಯನ್ನು ಗುಣಮಟ್ಟದಿಮದ ನಿರ್ಮಿಸುವಂತೆ ಸೂಚಿಸಿದರು.


ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಪಾಲನ್ನ,ಮಾಜಿ ಸಂಸದರಾದ ಜೆ.ಶಾಂತಾ,ಎಪಿಎಂಸಿ ಅಧ್ಯಕ್ಷ ಉಮೇಶ, ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ,ಇಬ್ರಾಹಿಂ, ಮೋತ್ಕರ್ ಶ್ರೀನಿವಾಸ್, ರಾಬಕೋವಿ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರರೆಡ್ಡಿ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here