ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
153

BP NEWS: ರಾಯಚೂರು: ಆಗಸ್ಟ್. 27: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ ಪ್ರೋತ್ಸಾಹ ಕಗಳನ್ನು ನೀಡುವ ಉದ್ದೇಶದಿಂದ 50 ಕೋಟಿ ರೂ.ಗಳನ್ನು ಒದಗಿಸಿದೆ. ಅದರ ಉಪಯೋಗ ಪಡೆದು ರಫ್ತು ಮಾಡಲು ಕೆಪೆಕ್ ಮೂಲಕ ಎಲ್ಲಾ ಸಹಾಯ ಮತ್ತು ಸಹಕಾರವನ್ನು ಸರ್ಕಾರ ಮಾಡಲಿದೆ ಎಂದರು.
ಕಾಲ ಬದಲಾಗಿದೆ. ಅಕ್ಕಿ ಬೆಳೆಯುತ್ತಿದ್ದೇವೆ. ಅದೇ ನಮಗೆ ಆಹಾರವಾಗಿದೆ. ಆದರೆ ಆರೋಗ್ಯ ಗಮನಿಸಿದಾಗ ಕನಿಷ್ಠ ವಾಗಿಯಾದರೂ ಸಿರಿಧಾನ್ಯಗಳನ್ನು ಆಹಾರವಾಗಿ ಸೇವಿಸಬೇಕು. ರೈತರು ಸಿರಿಧಾನ್ಯಗಳನ್ನು ಮುಖ್ಯ ಆಹಾರವಾಗಿ ಬಳಸುತ್ತಿದ್ದರು.ಈಗ ಸರ್ಕಾರ ಕಾರ್ಯಕ್ರಮವನ್ನು ಮಾಡಿ ಬೆಳೆಸಲು ಉತ್ತೇಜನ ನೀಡುವ ಸ್ಥಿತಿಗೆ ನಾವು ಬಂದಿದ್ದೇವೆ. ಮಿಲೆಟ್ ಗಳ ಬಗ್ಗೆ ಅತಿ ದೊಡ್ಡ ರಾಯಭಾರಿಗಳು ನಾವು. ಕಳೆದ 30 ವರ್ಷಗಳಿಂದ ಸಿರಿಧಾನ್ಯಗಳನ್ನು ಬಳಕೆ ಮಾಡುತ್ತಿದ್ದೇನೆ.ಅನ್ನವನ್ನು ಊಟ ಮಾಡುವುದಿಲ್ಲ. ಹೀಗಾಗಿ ಸಿರಿಧಾನ್ಯಗಳನ್ನು ಅತ್ಯಂತ ಯಶಸ್ವಿ ಮಾಡಲು ನಾನು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತೇನೆ ಎಂದರು.


ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ: ಕಲ್ಯಾಣ ಕರ್ನಾಟಕ ಅರೆ ಒಣ ಪ್ರದೇಶ. ಜಾಹೀರಾಬಾದಿನಲ್ಲಿರುವ ಕೃಷಿ ಸಂಸ್ಥೆಯಲ್ಲಿ 108 ವರ್ಷದ ಜೋಳ, ನವಣೆ, ಸಾಮೆಗಳನ್ನು ಸಂರಕ್ಷಣೆ ಮಾಡಿದ್ದು, ರೈತರು ಹೇಗೆ ಬೆಳೆಯಬೇಕೆಂದು ತರಬೇತಿಯನ್ನು ನೀಡುತ್ತಾರೆ. ಇಂಥ 8 ಸಂಸ್ಥೆಗಳು ಜಗತ್ತಿನಲ್ಲಿದ್ದು, ಈ ಪೈಕಿ ಜಾಹೀರಾಬಾದಿನಲ್ಲಿದೆ. ಇಲ್ಲಿನ ಹವಾಮಾನಕ್ಕೆ ತಕ್ಕ ಬೆಳೆಗಳನ್ನು ಬೆಳೆಯಬೇಕು. ಇದಕ್ಕೆ ವಿಶೇಷ ಮಾರುಕಟ್ಟೆ ನಿರ್ಮಾಣ ಮಾಡುವುದು ಸರ್ಕಾರದ ಸಂಘ ಸಂಸ್ಥೆಗಳ ಕರ್ತವ್ಯ. ಮಾರುಕಟ್ಟೆ ನಿರ್ಮಾಣ ಮಾಡಲು ವಿಶೇಷ ಗಮನ ನೀಡಬೇಕು. ಮಾರುಕಟ್ಟೆಗೆ ಸಂಸ್ಕರಣಾ ಘಟಕಗಳು ಅಗತ್ಯವಿದೆ. ರಾಗಿ, ಸಾಮೆ, ನವಣೆ, ಬರಗು, ಉದುಲು, ಹಾರಕ, ಕೊರ್ಲ ಎಂಬ ಏಳು ಸಿರಿಧಾನ್ಯಗಳನ್ನು ಬೆಳೆಯುತ್ತೇವೆ. ಕಲ್ಯಾಣ ಕರ್ನಾಟಕದಲ್ಲಿ 7 ಜಿಲ್ಲೆಗಳಿವೆ. ಏಳು ಜಿಲ್ಲೆಗಳಲ್ಲಿ 7 ಸಿರಿಧಾನ್ಯಗಳನ್ನು ನಾವು ಬೆಳೆಸಬೇಕು. ಅದರ ಉತ್ಪಾದನೆ, ಇಳುವರಿ ಹೆಚ್ಚು ಮಾಡಿ ಗುಣಮಟ್ಟ ವನ್ನು ಸುಧಾರಿಸಬೇಕು. ರಾಯಚೂರು ಕರ್ನಾಟಕದ ಪ್ರಮುಖ ಸ್ಥಳ. ಇದರ ಸಮಗ್ರ ಅಭಿವೃದ್ಧಿ ಕೃಷಿಗೆ ನೇರವಾದ ಸಂಬAಧವಿದೆ. ಬರುವ ತಿಂಗಳಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಹಾಕಲಾಗುವುದು.ಅದರೊಂದಿಗೆ ವಿಶೇಷವಾದ ಕೈಗಾರಿಕಾ ಪಾರ್ಕ್ ಇದೇ ವರ್ಷ ನಿರ್ಮಿಸಲಾಗುವುದು ಎಂದರು.
ರಾಯಚೂರಿನಲ್ಲಿ ಜವಳಿ ಪಾರ್ಕ್: ಕರ್ನಾಟಕದ ಜವಳಿ ನೀತಿಯಿಂದ ಪ್ರೋತ್ಸಾಹಕಗಳಿರುವ ಜವಳಿ ಪಾರ್ಕ್ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ನೆರವಿನಿಂದ ರಾಯಚೂರಿನಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ಬಳ್ಳಾರಿಯಲ್ಲಿ ಜೀನ್ಸ್ ತಯಾರಿಸುವ ಕಾರ್ಖಾನೆ ಇದೆ. ಉತ್ತಮ ಹತ್ತಿ ಬೆಳೆಯುವ ಕಾಲವಿತ್ತು. ರಫ್ತು ಮಾಡುವಂಥ ಹತ್ತಿ ಬೆಳೆಯಲಾಗುತ್ತಿತ್ತು. ಇದಕ್ಕೆ ಮಾರುಕಟ್ಟೆ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಆ ಕೆಲಸವನ್ನು ಮಾಡುತ್ತೇವೆ ಎಂದರು.


ರೈತರ ಹೊಲಗಳು ಸಂಶೋಧನಾ ಕೇಂದ್ರಗಳಾಗಬೇಕು: ರಾಯಚೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಅಭಿವೃದ್ಧಿಗೆ ಸಂಬAಧಿಸಿದ ಎಲ್ಲಾ ಚಟುವಟಿಕೆಗಳ ಕೇಂದ್ರವಾಗಿರಬೇಕು. ಪ್ರಯೋಗಾಲಯದಿಂದ ಭೂಮಿ ಯವರೆಗೆ ಇಲ್ಲಿನ ಸಂಶೋಧನೆಗಳು ತಲುಪಬೇಕು. ರೈತರಿಗೆ ನಿಮ್ಮ ಸಂಶೋಧನೆ ಉಪಯುಕ್ತವಾಗಬೇಕು. ಕೃಷಿ ಆವರಣದಲ್ಲಿ ಆಗುವ ಸಂಶೋಧನೆ ಗಳಿಗೆ ನಿಮ್ಮನ್ನು ಸೀಮಿತ ಗೊಳಿಸಬೇಡಿ. ರೈತರ ಹೊಲಗಳು ನಿಮ್ಮ ಸಂಶೋಧನಾ ಕೇಂದ್ರ ಗಳಾಗಬೇಕು. ನೈಜ ಪರಿಸ್ಥಿತಿಯಲ್ಲಿ ಬೆಳವಣಿಗೆಯಾಗಬೇಕು. ಮನಸ್ಥಿತಿ ಬದಲಾಗಬೇಕು. ಜನಸಂಖ್ಯೆ ದೊಡ್ಡದಿದೆ, ಅವಶ್ಯಕತೆ ಗಳು ದೊಡ್ಡದಿದೆ.ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಪಾತ್ರ ನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಶೋಧನೆಗಳು ಆಗಬೇಕು. ಅದಕ್ಕೆ ಆರ್.ಅಂಡ್ ಡಿ ನೀತಿ ತರಲಾಗಿದೆ. ನಿಮ್ಮ ಪ್ರಯೋಗಾಲಯಕ್ಕೆ 15 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ರೈತರಿಗೆ ಉಪಯೋಗವಾಗುವ ಸಂಶೋಧನೆ ಮಾಡಬೇಕು. ಸಿರಿಧಾನ್ಯ ವರ್ಷ ಸಿರಿಧಾನ್ಯ ಮಿಲೇನಿಯಂ ಆಗಬೇಕು. ಜನ ಬದಲಾಗುತ್ತಿದ್ದಾರೆ. ರೈತರು ಇವುಗಳನ್ನು ಉತ್ಪಾದಿಸಿ ಲಾಭ ಪಡೆಯಬೇಕು. ಸುರಕ್ಷಾ ಚಕ್ರವನ್ನು ಸರ್ಕಾರ ನೀಡುತ್ತದೆ. ಜನವರಿಯಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ರಾಯಚೂರು ಮಿಲೆಟ್ ಡಿಕ್ಲರೇಶನ್: ಇದೊಂದು ಮಹತ್ವದ ಸಭೆ. ರಾಜ್ಯ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಸಮಾವೇಶದಲ್ಲಿನ ಚರ್ಚೆ ನಿರ್ಧಾರಗಳನ್ನು ಬರುವ ದಿನಗಳಲ್ಲಿ ಅನುಷ್ಠಾನ ಮಾಡಲು ಸಮಾವೇಶದಲ್ಲಿ ರೂಪುರೇಷೆಗಳು ಹೊರಬರುತ್ತವೆ ಎಂದು ಆಶಿಸುತ್ತೇನೆ. ಇಲ್ಲಿನ ಚರ್ಚೆ ಮತ್ತು ನಿರ್ಧಾರಗಳನ್ನು ಮುದ್ರಿಸಿ ‘ರಾಯಚೂರು ಮಿಲೆಟ್ ಡಿಕ್ಲರೇಶನ್’ ಎಂದು ಹೆಸರಿಸಿ ಒದಗಿಸಬೇಕು. ಸಿರಿಧಾನ್ಯಗಳನ್ನು ಬೆಳೆಯುವುದು, ಬಳಸುವುದು ಹಾಗೂ ಸಂಸ್ಕರಿಸುವುದು, ಮಾರುಕಟ್ಟೆ, ರಫ್ತು ಮಾಡುವ ದಾರಿಯಲ್ಲಿ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಅನುದಾನ ನೀಡಿ ರೈತರಿಗೆ ಸಲಹೆ ಸಹಕಾರವನ್ನು ನೀಡುತ್ತದೆ. ಕೇಂದ್ರದ ಸಹಯೋಗದೊಂದಿಗೆ ಅದನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುತ್ತೇವೆ. ಹೀಗಾಗಿ ನಾವು ರಾಯಚೂರು ಮಿಲೆಟ್ ಡಿಕ್ಲರೇಶನ್’ ನ್ನು ಅತ್ಯಂತ ಕುತೂಹಲ ದಿಂದ ನಿರೀಕ್ಷೆ ಮಾಡುತ್ತೇವೆ ಎಂದರು. ಮುಂದಿರುವ ದಾರಿಯ ಬಗ್ಗೆ ನಮಗೆ ಸ್ಪಷ್ಟತೆ ಬೇಕು ಎಂದರು.


ರಾಗಿ ಶ್ರೇಷ್ಠ: ಸಿರಿಧಾನ್ಯಗಳು ಅತ್ಯಂತ ಕಡಿಮೆ ಮಳೆ ಆಶ್ರಿತ ಪ್ರದೇಶಗಳಲ್ಲಿ ಬೆಳೆಯುತ್ತವೆ. ಇದರಲ್ಲಿಅತಿ ಹೆಚ್ಚು ಪೌಷ್ಟಿಕಾಂಶವಿರುವAತದ್ಧು, ಶಕ್ತಿ ನೀಡುವುದು. 4500 ವರ್ಷಗಳಿಂದ ಬೆಳೆಯುತ್ತಿರುವ, ನಿಸರ್ಗಕ್ಕೆ ಹೊಂದಿಕೊAಡು ಬೆಳೆಯುವ ಸಿರಿಧಾನ್ಯಗಳು. ಶ್ರೀರಾಮಧ್ಯಾನದಲ್ಲಿ ರಾಗಿ ಮತ್ತು ಅಕ್ಕಿಯನ್ನು ಹೋಲಿಸುತ್ತಾರೆ. ರಾಗಿಯೇ ಹೆಚ್ಚು ಶ್ರೇಷ್ಠ ಎಂದು ತೀರ್ಮಾನಿಸಿಸುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ವೇಳೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮಾತನಾಡಿ, 2023 ಅನ್ನು ಅಂತರಾಷ್ಟಿçÃಯ ಸಿರಿಧಾನ್ಯ ವರ್ಷವಾಗಿ ಘೋಷಿಸಲಾಗಿದೆ. ಪ್ರಸ್ತುತ ನಮ್ಮಲ್ಲಿ 20 ಲಕ್ಷ ಮೆಟ್ರಿಕ್ ಟನ್ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಸರ್ಕಾರ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹಧನ ಹಾಗೂ ಸಿರಿಧಾನ್ಯಗಳ ಸಂಸ್ಕರಣೆಗೆ ಶೇ. 50 ರಷ್ಟು ಗರಿಷ್ಟ 10 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತಿದೆ. ರೈತರ ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವ ಸಲುವಾಗಿ ನಮ್ಮ ಸರ್ಕಾರ ರೈತ ವಿದ್ಯಾನಿಧಿ ಯೋಜನೆಯಡಿ ಎಲ್ಲ ವರ್ಗದ ಮಕ್ಕಳಿಗೂ ಸ್ಕಾಲರ್‌ಶಿಪ್ ನೀಡುತ್ತಿದೆ. ಅದನ್ನು ಈಗ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ 10 ಲಕ್ಷ ಮಕ್ಕಳಿಗೆ ಸ್ಕಾಲರ್‌ಶಿಪ್ ನೀಡಲಾಗುತ್ತಿದೆ. ಕೃಷಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಲ್ಲಿ ಶೇ. 50 ರಷ್ಟು ರೈತರ ಮಕ್ಕಳಿಗೆ ಮೀಸಲಿರಿಸಲಾಗಿದೆ. ರೈತ ಶಕ್ತಿ ಯೋಜನೆಯಡಿ ಡೀಸೆಲ್ ಬಳಸುವ ರೈತರಿಗೆ ಗರಿಷ್ಟ 1250 ರೂ. ಗಳವರೆಗೂ ಸಬ್ಸಿಡಿ ನೀಡಲಾಗುತ್ತಿದೆ. ರೈತರ ಹೊಲಗಳಲ್ಲೇ ತಜ್ಞರು ತೆರಳಿ ಸಮಸ್ಯೆಗಳನ್ನು ನಿವಾರಿಸಲು ಕೃಷಿ ಸಂಜೀವಿನಿ ಯೋಜನೆಯಡಿ ಎಲ್ಲ ತಾಲ್ಲೂಕುಗಳಿಗೂ ವಾಹನಗಳನ್ನು ಒದಗಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ್ ಮುನೇನಕೊಪ್ಪ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಶಿವನಗೌಡ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ. ಎಸ್.ಶಿವರಾಜ್ ಪಾಟೀಲ್., ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ನಮೋಶಿ, ಚಂದ್ರಶೇಖರ ಪಾಟೀಲ್, ಶರಣಗೌಡ ಪಾಟೀಲ್ ಬಯ್ಯಾಪುರ, ಹಟ್ಟಿ ಚಿನ್ನದ ಗಣಿ ನಿಗಮ ನಿಯಮಿತದ ಅಧ್ಯಕ್ಷ ಮಾನಪ್ಪ ಡಿ.ವಜ್ಜಲ್, ರಾಯಚೂರು ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಳ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಕೆ.ಎನ್. ಕಟ್ಟಿಮನಿ ಹಾಗೂ ವ್ಯವಸ್ಥಾಪನಾ ಸದಸ್ಯರಗಳಾದ ಕೊಟ್ರೇಶಪ್ಪ ಬಿ. ಕೋರಿ, ತ್ರಿವಿಕ್ರಮ್ ಜೋಶಿ, ಮಹಾಂತೇಶ್ ಗೌಡ ಬಿ. ಪಾಟೀಲ್, ಜಿ.ಶ್ರೀಧರ್ ಕೆಸರಟ್ಟಿ, ಸುನಿಲ್ ಕುಮಾರ್ ವರ್ಮ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.
ಸಮಾರಂಭಕ್ಕೂ ಪೂರ್ವದಲ್ಲಿ ಮುಖ್ಯಮಂತ್ರಿಗಳು ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಅಹವಾಲು ಹಾಗೂ ಮನವಿ ಪತ್ರಗಳನ್ನು ಸ್ವೀಕರಿಸಿದರು. ಕೃಷಿ ವಿವಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಮಳಿಗೆಗಳ ಉದ್ಘಾಟನೆಯನ್ನು ಇದೇ ಸಂದರ್ಭದಲ್ಲಿ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here