BP News Karnataka Super Fast 10-09-2022

0
243

ಬಳ್ಳಾರಿಯಲ್ಲಿ ಸಂಭ್ರಮದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ


BP News  ಬಳ್ಳಾರಿ,ಸೆ.10=ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಈಡಿಗರ ಹಾಸ್ಟೆಲ್ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವದ ಮೆರವಣಿಗೆಗೆ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.
ಶಾಸಕರಾದ ಜೆ.ಎನ್.ಗಣೇಶ್, ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್ ಇನ್ನಿತರರು ಇದ್ದರು.
—–
ಬಸರಕೋಡು ಗ್ರಾಮಕ್ಕೆ ತಹಸೀಲ್ದಾರ್ ಭೇಟಿ:ಪರಿಶೀಲನೆ


BP News  ಬಳ್ಳಾರಿ,ಸೆ.10-ಬಳ್ಳಾರಿ ತಾಲೂಕಿನ ಬಸರಕೋಡು ಗ್ರಾಮಕ್ಕೆ ತಹಸೀಲ್ದಾರ್ ವಿಶ್ವನಾಥ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಡಳಿತ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರದಲ್ಲಿ ಅಲ್ಲಿನ ಜನರೊಂದಿಗೆ ತಹಸೀಲ್ದಾರ್ ಅವರು ಊಟ ಮಾಡಿ, ಜನರು ಜಿಲ್ಲಾಡಳಿತ ವತಿಯಿಂದ ಉತ್ತಮ ರುಚಿ ಹಾಗೂ ಗುಣಮಟ್ಟ ಆಹಾರವನ್ನು ನೀಡಿದ್ದರಿಂದ ಅಲ್ಲಿನ ಜನರು ಜಿಲ್ಲಾಡಳಿತವನ್ನು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ತಹಸೀಲ್ದಾರ್ ವಿಶ್ವನಾಥ ಅವರು ತಿಳಿಸಿದ್ದಾರೆ.
——
ವಿಜಯನಗರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ


BP News  ಹೊಸಪೇಟೆ(ವಿಜಯನಗರ),ಸೆ.10- ವಿಜಯನಗರ ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
——
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ


BP News  ಹೊಸಪೇಟೆ(ವಿಜಯನಗರ),ಸೆ.10- ಹೊಸಪೇಟೆ ತಾಲೂಕು ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರದಂದು ಆಚರಿಸಲಾಯಿತು.
ತಹಶೀಲ್ದಾರ್ ವಿಶ್ವಜಿತ್ ಮೇಹತಾ ಅವರು ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
———-
ಶಾಸಕ ಜಿ.ಸೋಮಶೇಖರ್ ರೆಡ್ಡಿ ನೀರಿನ ಪೈಪ್ ಲೈನ್ ಕಾಮಗಾರಿಗೆ ಭೂಮಿ ಪೂಜೆ


BP News ಬಳ್ಳಾರಿ,ಸೆ.10-ಕಳೆದ 6 ದಶಕದ ಹಿಂದೆ ಕುಡಿಯುವ ನೀರಿಗಾಗಿ ಅಳವಡಿಸಿದ್ದ ಪೈಪ್ ಇದೀಗ ಬೇರ್ಪಡಿಸಿ ಪರ್ಯಾಯ ಪೈಪ್ ಲೈನ್ ಅಳವಡಿಸಲು ನಿರ್ಧರಿಸಿದ್ದು ಇಂದು ಮಹಾನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಪ್ರಸಾದ್ ಎಸ್., ಮಹಾನಗರ ಪಾಲಿಕೆಯ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು, ಸದಸ್ಯರಾದ ಸುರೇಖಾ ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಇನ್ನಿತರರು ಇದ್ದರು.
—–

LEAVE A REPLY

Please enter your comment!
Please enter your name here