BP NEWS: ಬಳ್ಳಾರಿ: ಸೆಪ್ಟೆಂಬರ್.20: ಭಾರತ ಸರ್ಕಾರದ ಸ್ಥಾಯಿ ಸಂಸ್ಥೆಯಾದ ನೆಹರು ಯುವ ಕೇಂದ್ರ ಹಾಗೂ ಮಾತೃ ಮಹಿಳಾ ಮಂಡಳಿ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜ್‍ನಲ್ಲಿ ಮಂಗಳವಾರದಂದು ವಿಕಾಸ್ ದಿವಸ್ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಮೊಂಟು ಪಾತರ್ ಅವರು ನೆಹರು ಯುವ ಕೇಂದ್ರದಿಂದ ನೀಡುವ ಸರ್ಕಾರದ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಹನುಮಂತಪ್ಪ ಅವರು ಪ್ಲಾಸ್ಟಿಕ್ ನಿಷೇಧದ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಕೆ.ವೆಂಕಟರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತೃ ಮಹಿಳಾ ಮಂಡಳಿಯ ಅಧ್ಯಕ್ಷರಾದ ಪುಷ್ಪ, ಅರ್ಥಶಾಸ್ತ್ರ ಶಿಕ್ಷಕರಾದ ಪಿ.ನಾಗೇಶರಾವ್ ಮತ್ತು ತಿಮ್ಮಪ್ಪ ಮತ್ತು ಇಂಗ್ಲೀಷ ಶಿಕ್ಷಕರಾದ ಮಂಜುನಾಥ ರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.