ಮೆಗಾ ಉದ್ಯೋಗ ಮೇಳ: ಬಳ್ಳಾರಿಯಲ್ಲಿ ಡಿಸೆಂಬರ್ 27ರಂದು ಆಯೋಜನೆ

0
20
Advertisement

ಬಳ್ಳಾರಿ, ಡಿ.26: ಬಳ್ಳಾರಿ ನಗರದಲ್ಲಿ ಉದ್ಯೋಗಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಮೆಗಾ ಉದ್ಯೋಗ ಮೇಳವನ್ನು ಡಿಸೆಂಬರ್ 27, 2025ರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ನೇರ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದು, ಎಸ್.ಎಸ್.‌ಎಲ್.‌ಸಿ, ಪಿ.ಯು.ಸಿ, ಡಿಪ್ಲೊಮಾ,ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿದಾರರಿಗೆ ಉದ್ಯೋಗ ಅವಕಾಶಗಳು ಲಭ್ಯವಿದೆ. ಫ್ರೆಶರ್ಸ್ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಈ ಉದ್ಯೋಗ ಮೇಳವನ್ನು ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ (AMP) ಆಯೋಜಿಸಿದ್ದು, ಹೆಲ್ಪಿಂಗ್‌ ಹ್ಯಾಂಡ್‌(H.H) ಸೇರಿದಂತೆ ಹಲವು ಸಂಸ್ಥೆಗಳು ಸಹಭಾಗಿತ್ವ ನೀಡಿವೆ. ಹೆಚ್ಚಿನ ಮಾಹಿತಿಗಾಗಿ ನೋಂದಣಿ ಲಿಂಕ್ ಅಥವಾ ಕ್ಯೂಆರ್(QR) ಕೋಡ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಈ ಮೇಳವು ಸುವರ್ಣಾವಕಾಶವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Advertisement

LEAVE A REPLY

Please enter your comment!
Please enter your name here