ಬಳ್ಳಾರಿಯಲ್ಲಿ ವಿಶ್ವ ಹಿರಿಯ ನಾಗರೀಕರ ದಿನ ಆಚರಣೆ

0
215

BP NEWS: ಬಳ್ಳಾರಿ: ಅಕ್ಟೋಬರ್.01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರೀಕರಿಗಾಗಿ ಶ್ರಮಿಸುತ್ತಿರುವ ಸ್ವಯಂ-ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರದಂದು ಮೋತಿ ವೃತ್ತದ ಬುಡಾ ಕಚೇರಿಯ ಹತ್ತಿರದ ಕೆ.ಇ.ಬಿ ಫಂಕ್ಷನ್ ಹಾಲ್‍ನಲ್ಲಿ ಆಚರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ವಿಜಯಕುಮಾರ್ ಕೆ.ಹೆಚ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾರಿಕರ ಸಮಸ್ಯೆಗಳನ್ನು ಹಿರಿಯ ನಾಗರಿಕರ ಸಹಾಯವಾಣಿ ಮುಖಾಂತರ ಪರಿಹರಿಸಿಕೊಳ್ಳಲು ತಿಳಿಸಿದರು.


ಹಿರಿಯ ನಾಗರೀಕರು ಜೀವಂತ ಇರುವವರೆಗೂ ಯಾವುದೇ ಕಾರಣಕ್ಕೂ ಆಸ್ತಿ ಮತ್ತು ನಗದನ್ನು ಮಕ್ಕಳಿಗೆ ವರ್ಗಾಹಿಸಬೇಡಿ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯವಾದಿಗಳಾದ ಚಂದ್ರಕಲಾ ಅವರು ಹಿರಿಯ ನಾಗರಿಕರ ಸಮಸ್ಯೆಗಳನ್ನು ಕಾನೂನಿನ ಮೂಲಕ ಉಚಿತವಾಗಿ ಬಗೆಹರಿಸಿಕೊಳ್ಳಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಮತ್ತು ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಕಲ್ಯಾಣಾಧಿಕಾರಿಗಳಾದ ಗೋವಿಂದಪ್ಪ ಹೆಚ್.ಎಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ನಾಗರಾಜ, ಚೆಂಗಾರೆಡ್ಡಿ ವೃದ್ದಾಶ್ರಮ ಆಡಳಿತಾಧಿಕಾರಿಗಳಾದ ಕೆ.ಹೆಚ್. ಗುರುಮೂರ್ತಿ, ಸ್ಮೈಲ್ ಸಂಸ್ಥೆಯ ಪಣಿರಾಜ್, ಸೇರಿದಂತೆ ಇತರೆ ಗಣ್ಯರು ಮತ್ತು ಹಿರಿಯ ನಾಗರಿಕರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here