BP News Karnataka Super Fast 14-10-2022

0
249

ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಿದ್ದತಾ ಸಭೆ


BP News ವಿಜಯನಗರ(ಹೊಸಪೇಟೆ)ಅ.14- ಸ್ವಾತಂತ್ರ್ಯ ಹೋರಾಟಗಾರ್ತಿ, ವೀರವನಿತೆ ಕಿತ್ತೂರುರಾಣಿ ಚೆನ್ನಮ್ಮ ಅವರ ಜಯಂತಿಯನ್ನು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಅ.23ರಂದು ಕೊಟ್ಟೂರು ಸ್ವಾಮಿ ಮಠದ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಹೊಸಪೇಟೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಹೇಳಿದ್ದಾರೆ.
ಕಿತ್ತೂರುರಾಣಿ ಚನ್ನಮ್ಮ ಶಾಲೆಯ ಆವರಣದಲ್ಲಿರುವ ಕಿತ್ತೂರುರಾಣಿ ಚನ್ನಮ್ಮ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕೊಟ್ಟೂರು ಸ್ವಾಮಿ ಮಠದ ಆವರಣದಲ್ಲಿ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
—-
ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಆರೋಗ್ಯ ಕಾರ್ಡ್ ವಿತರಿಸಿ: ಎಡಿಸಿ ಮಂಜುನಾಥ


BP News ಬಳ್ಳಾರಿ,ಅ.14(ಕರ್ನಾಟಕ ವಾತೆ): ಜಿಲ್ಲೆಯ ಪ್ರತಿಯೊಬ್ಬ ನಾಗರೀಕರಿಗೂ ಡಿಸೆಂಬರ್ ಅಂತ್ಯದ ವೇಳೆಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡ್ ವಿತರಿಸುವ ಸಂಬಂಧ ಗ್ರಾಮಒನ್‍ನ ಪ್ರಾಂಚೈಸಿದಾರರು ಹಾಗೂ ನ್ಯಾಯಬೆಲೆ ಅಂಗಡಿಯವರು ವಿಶೇಷ ಅಸಕ್ತಿ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿಎಸ್ ಮಂಜುನಾಥ ಅವರು ಸೂಚಿಸಿದ್ದಾರೆ.
—–
ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಹಿನ್ನಲೆ
ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ


ವಿಜಯನಗರ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ


BP News ಹೊಸಪೇಟೆ(ವಿಜಯನಗರ)ಅ.14-ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆಸಲ್ಲಿಸಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಸಚಿವರಾಗಿ ವರ್ಗಾವಣೆಗೊಂಡಿರುವ ಎನ್.ಮಹೇಶ್‍ಬಾಬು ಅವರಿಗೆ ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
—–
ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಿ; ಕೆ.ಜಯಪ್ರಕಾಶ್ ಹೆಗ್ಡೆ


BP News ಹೊಸಪೇಟೆ(ವಿಜಯನಗರ)ಅ.14-ಹಿಂದುಳಿದ ವರ್ಗಗಳಡಿ ಬರುವ ವಿವಿಧ ವರ್ಗಗಳ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ತಿಳಿಸಿದರು.
ವಿಜಯನಗರ(ಹೊಸಪೇಟೆ) ಕ್ರೀಡಾ ಇಲಾಖೆಯ ಒಳಾಂಗಣ ಸಭಾಂಗಣದಲ್ಲಿ ಏರ್ಪಡಿಸಲಾದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
—-

LEAVE A REPLY

Please enter your comment!
Please enter your name here