BP NEWS: SUPER FAST: NOVEMBER.09:

0
235

BP NEWS: ಹೊಸಪೇಟೆ(ವಿಜಯನಗರ): ನವೆಂಬರ್.09: ಜಿಲ್ಲಾಡಳಿತ ಮತ್ತು ನಗರಸಭೆಯ ಸಂಯುಕ್ತಾಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023ರ ಜಾಗೃತಿ ಜಾಥಾವನ್ನು ಬುಧವಾರದಂದು ಹಮ್ಮಿಕೊಳ್ಳಲಾಯಿತು.
ವಿಜಯನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್ ಅವರು ನಗರಸಭೆ ಕಾರ್ಯಾಲಯದ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್ ಅವರು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭಗೊಂಡಿದ್ದು, ನೂತನವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸೇರಿದಂತೆ ಇನ್ನಿತರೆ ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದ ಸೇವೆಗಳನ್ನು ಮತದಾರರು ಪಡೆದುಕೊಳ್ಳಬಹುದು. 18 ವರ್ಷ ತುಂಬಿದ ಯುವಜನತೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ, ಇತರರಿಗೂ ಅರಿವು ಮೂಡಿಸಬೇಕು ಎಂದರು.


ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸಿದ್ರಾಮೇಶ್ವರ, ಡಿಡಿಪಿಐ ಜಿ.ಕೊಟ್ರೇಶ್, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ, ನಗರಸಭೆ ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ ಸೇರಿದಂತೆ ಇತರರು ಇದ್ದರು.


ಗ್ರಾಮಒನ್ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ ಹೆಲ್ತ್ ಅಕೌಂಟ್ ಕಾರ್ಡ್ ಉಚಿತ ನೋಂದಣಿ
BP NEWS: ಹೊಸಪೇಟೆ(ವಿಜಯನಗರ): ನವೆಂಬರ್.09: ರಾಜ್ಯದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು 2018ನೇ ಮಾ.2ರಿಂದ ಅನುಷ್ಠಾನಗೊಳಿಸಲಾಗಿದ್ದು, ನಂತರ ಭಾರತ ಸರ್ಕಾರವು ಆಯುಷ್ಮಾನ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡು ಯೋಜನೆಗಳ ಉದ್ದೇಶ ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕʼ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ ಅವರು ತಿಳಿಸಿದ್ದಾರೆ.


ಮತದಾರರ ಪಟ್ಟಿಯಲ್ಲಿ ವಿಶೇಷ ಚೇತನರ ಸಂಕ್ಷಿಪ್ತ ಪರಿಷ್ಕರಣೆ ನಿಮಿತ್ತ ಜಾಗೃತಿ ಜಾಥಾ
BP NEWS: ಬಳ್ಳಾರಿ: ನವೆಬರ್.09: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಕಲಚೇತನರ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಸಂಬಂಧಿಸಿದಂತೆ ಜಿಲ್ಲೆಯ ವಿಕಲಚೇತನರು ಹಾಗೂ ಗ್ರಾಮ ಪುನರ್ವಸತಿ ಕಾರ್ಯಕರ್ತರು ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಸೇರಿದಂತೆ ಸುಮಾರು 35 ರಿಂದ 40 ಯಂತ್ರಚಾಲಿತ ತ್ರಿಚಕ್ರ ವಾಹನದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಮತದಾರರ ನೊಂದಣಿಗೆ ಸಂಬಂಧಿಸಿದಂತೆ ಮತದಾನ ಸಂದೇಶದ ಫಲಕಗಳನ್ನು ಕೈಯಲ್ಲಿ ಹಿಡಿದುಕೊಂಡು ಜಾಗೃತಿ ಮೂಡಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ, ಅವರು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕುರಿತು ವಿಕಲಚೇತನರಿಗೆ ಸಂದೇಶ ನೀಡಿದರು.


ಮತದಾರರ ಪಟ್ಟಿಯಲ್ಲಿ ನೊಂದಣಿ, ತಿದ್ದುಪಡಿಗೆ ಅರ್ಜಿ ಆಹ್ವಾನ
BP NEWS: ಬಳ್ಳಾರಿ: ನವೆಂಬರ್.09: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಲು, ಹೆಸರನ್ನು ತೆಗೆದುಹಾಕಲು ಅಥವಾ ವರ್ಗಾವಣೆ ಮಾಡಲು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‍ಓ)ಗಳ ಬಳಿ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.
ನವಂಬರ್ 9 ರಿಂದ ಡಿಸೆಂಬರ್ 8 ರವರೆಗೆ ಆಕ್ಷೇಪಣೆಗಳು, ತಿದ್ದುಪಡಿ ಹಾಗೂ ಹೊಸದಾಗಿ ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಡಿ.26 ರಂದು ಎಲ್ಲಾ ಆಕ್ಷೇಪಣೆಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ನಮೂನೆ-6, ಹೆಸರನ್ನು ಕೈಬಿಡಲು ನಮೂನೆ-7, ತಿದ್ದುಪಡಿ, ವರ್ಗಾವಣೆ ಇದ್ದಲ್ಲಿ ನಮೂನೆ-8 ರಲ್ಲಿ ಮತಗಟ್ಟೆ ಅಧಿಕಾರಿ ಬಿ.ಎಲ್.ಓ ಅಥವಾ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು.ಮಾಹಿತಿಗಾಗಿ Voters Helpline App ಅಥವಾ www.nvsp.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಮತದಾರರ ಪಟ್ಟಿ ಪರಿಷ್ಕರಣೆ; ಮತದಾರರಲ್ಲಿ ಜಾಗೃತಿ ಮೂಡಿಸಲು ಸೈಕಲ್ ಜಾಥಾ
BP NEWS: ಬಳ್ಳಾರಿ: ನವೆಂಬರ್.09: ಬಳ್ಳಾರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ “ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023” ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯು ಪ್ರಕಟವಾಗಿದ್ದು, ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಲುವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಬುಧವಾರ ಬಳ್ಳಾರಿ ನಗರದಲ್ಲಿ ಸೈಕಲ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಲಿಂಗಮೂರ್ತಿ ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕರಾದ ಲಕ್ಷ್ಮಣ ಶೃಂಗೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಂದಾನಪ್ಪ ವಡಗೇರಿ, ಡಿಡಿಪಿಯು ಸುಗೇಂದ್ರ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸೈಕಲ್ ಜಾಥಾವು ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ರಾಯಲ್ ಸರ್ಕಲ್, ಮೋತಿ ಸರ್ಕಲ್, ಕೋಟೆ ಮುಂಭಾಗವಾಗಿ ಎಸ್.ಪಿ ಸರ್ಕಲ್ ಮಾರ್ಗವಾಗಿ ಮತ್ತೆ ದುರ್ಗಮ್ಮ ದೇವಸ್ಥಾನದ ಹತ್ತಿರ ಕೊನೆಗೊಂಡಿತು.

——————–

LEAVE A REPLY

Please enter your comment!
Please enter your name here