BP NEWS: ಬಳ್ಳಾರಿ: ಡಿಸೆಂಬರ್.05: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಸೋಮವಾರ ನಡೆದ ಜಾಗೃತಿ ಜಾಥಾ ಗಮನಸೆಳೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭವಾದ ಮೆರವಣಿಗೆಗೆ ಜಿಪಂ ಸಿಇಒ ಜಿ.ಲಿಂಗಮೂರ್ತಿ ಅವರು ಚಾಲನೆ ನೀಡಿದರು. ಮೆರವಣಿಗೆಯು ಸಂಗಮ್ ಸರ್ಕಲ್, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್ ಮುಖಾಂತರ ಬಿಎಸ್‍ಎನ್‍ಎಲ್ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಮುಖಾಂತರ ರಾಯಲ್ ಸರ್ಕಲ್ ಮಾರ್ಗವಾಗಿ ಜಿಲ್ಲಾ ಆಸ್ಪತ್ರೆಗೆ ಮರಳಿತು.
ಮೆರವಣಿಗೆಯುದ್ದಕ್ಕೂ ಎಚ್‍ಐವಿ ಜಾಗೃತಿಗೆ ಸಂಬಂಧಿಸಿದ ಘೋಷಣಾ ಫಲಕಗಳು, ಭಿತ್ತಿಪತ್ರಗಳ ಪ್ರದರ್ಶನ ಗಮನಸೆಳೆದವು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲೆಯಲ್ಲಿ ಎಚ್‍ಐವಿ ಪೀಡಿತರಿಗೊಸ್ಕರ ಶ್ರಮಿಸುತ್ತಿರುವ ವಿಮುಕ್ತಿ, ಸೌಖ್ಯಬೆಳಕು, ನಿತ್ಯಜೀವನ ಸ್ವಯಂಸೇವಾ ಸಂಸ್ಥೆಗಳು, ಫ್ಯಾಮಿಲಿ ಪ್ಲಾನಿಂಗ್ ಅಸೊಸಿಯೇಶನ್ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನಸೆಳೆದವು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜರ್ನಾಧನ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ.ಇಂದ್ರಾಣಿ ಅನಿಲಕುಮಾರ್, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಆರ್.ಅನಿಲಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ವೀರೆಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಈಶ್ವರ ದಾಸಪ್ಪನವರ್ ಸೇರಿದಂತೆ ಸರಳಾದೇವಿ ಕಾಲೇಜ್ ಹಾಗೂ ಅಲ್ಲಂ ಸುಮಂಗಳಮ್ಮ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.