ಬಳ್ಳಾರಿ: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

0
84

BP NEWS: ಬಳ್ಳಾರಿ: ಡಿಸೆಂಬರ್.13: ಇತ್ತೀಚಿನ ದಿನಗಳಲ್ಲಿ ಕಲೆಗಳು ನಶಿಸಿ ಹೋಗುತ್ತಿದ್ದು, ಯುವ ಸಮಾಜವು ಕಲೆಗಳನ್ನು ಕರಗತ ಮಾಡಿಕೊಳ್ಳುವ ಮೂಲಕ ಕಲೆಗೆ ಹೆಚ್ಚು ಒತ್ತು ನೀಡಬೇಕು ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಎಂ.ರಾಜೇಶ್ವರಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ ವಿವೇಕಾನಂದ ಯುವಕ ಸಂಘ ಹಾಗೂ ಸ್ಥಳೀಯ ಯುವಕ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರು ಕಲೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಗಳು ಸಾಕಷ್ಟು ಇದ್ದು, ಅವುಗಳನ್ನು ಬಳಸಿಕೊಂಡು ತಮ್ಮ ಕಲೆಗಳ ಪ್ರದರ್ಶನ ನೀಡಬೇಕು. ಸ್ಪರ್ಧೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ನಂತರದಲ್ಲಿ ವಿವಿಧ ಶಾಲಾ – ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಹಾಗೂ ವಿವೇಕಾನಂದ ಯುವಕ ಸಂಘ ಸಂಸ್ಥಾಪಕ ಪಿ.ಗಾದೆಪ್ಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಂ.ಶಿವಾಜಿರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹರಿಸಿಂಗ್ ರಾಥೋಡ್, ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ರಾಘವೇಂದ್ರ, ಗುಂಡಿ ರಮೇಶ್, ಜಿಲ್ಲಾ ಪ್ರಶಸ್ತಿ ಪುರಸ್ಕøತೆ ಉμÁ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ಯುವಕರು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here