ಬಳ್ಳಾರಿ ಫೈರಿಂಗ್‌; ಶಾಸಕ ಭರತ್‌ ರೆಡ್ಡಿ ಗೂಂಡಾಗಿರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ!

0
32
Advertisement

ಬಳ್ಳಾರಿ, ಜ.02: ಬಳ್ಳಾರಿಯಲ್ಲಿ ಬ್ಯಾನರ್‌ ವಿಷಯವಾಗಿ ನಡೆದ ಫೈರಿಂಗ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಗೂಂಡಾಗಿರಿ ವರ್ತನೆಯನ್ನ ಖಂಡಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ  ವಿಜಯೇಂದ್ರ ಅವರು , ಗೂಂಡ ದರ್ಜೆ ಮಾಡಿಕೊಂಡು, ಜನಾರ್ದನ ರೆಡ್ಡಿ, ಶ್ರೀ ರಾಮುಲು ಹಾಗೆಯೇ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಬಹದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್‌ ಶಾಸಕ ಭರತ್‌ ರೆಡ್ಡಿ ಗೂಂಡ ವರ್ತನೆ ಮಾಡಿದ್ದಾರೆ. ನಮ್ಮ ಕಾರ್ಯಕರ್ತರು ದೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಬಳ್ಳಾರಿಯ ವೃತ್ತದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ವಿಚಾರದಲ್ಲಿ ಗಲಾಟೆಯಾಗಿದೆ. ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷಕ್ಕೆ, ಮಹರ್ಷಿ ವಾಲ್ಮೀಕಿ ಅವರಿಗೆ ಗೌರವವನ್ನು ಕೊಡ್ಬೇಕು, ನಮ್ಮ ಸಮಾಜದ ಎಲ್ಲಾ ವರ್ಗದ ಜನರು ಪೂಜಿಸಬೇಕು, ಆರಾಧಿಸಬೇಕು ಎಂಬ ಚಿಂತನೆಯೊಂದಿಗೆ, ಶ್ರೀ ರಾಮುಲು ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರಿಗೆ ಹೇಳಿದವರು. ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು, ರಜಾದಿನವನ್ನಾಗಿ ಘೋಷಣೆ ಮಾಡ್ಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನಿಸಿ ಯಡಿಯೂರಪ್ಪನವರ ಮನವೋಲಿಸಿ, ವಾಲ್ಮೀಕಿ ಭವನವನ್ನು ನಿರ್ಮಿಸಲು ಅನುದಾನ ಕೊಡಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಇಂದು ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್‌ ಪಕ್ಷ ಗೂಂಡಾಗಿರಿ ಮಾಡ್ಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು

Advertisement

LEAVE A REPLY

Please enter your comment!
Please enter your name here