ಬಳ್ಳಾರಿಯಲ್ಲಿ ದಾಖಲೆ ಬರೆದ ಯೋಗಾಥಾನ್ ಕಾರ್ಯಕ್ರಮ

0
143

BP NEWS: ಬಳ್ಳಾರಿ: ಜನೇವರಿ.15: ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಯೋಗಾಭ್ಯಾಸವನ್ನು ರೂಢಿಸಿಕೊಳ್ಳಿ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ, ಜಿಲ್ಲಾ ಆಯುμï ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೊಳಗಲ್ ರಸ್ತೆಯ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಯೋಗಾಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದ ಋಷಿಮುನಿಗಳು ಹಾಗೂ ಮಾನವರು ಯೋಗ ಮಾಡುತ್ತಿದ್ದರು. ಇದರಿಂದ ಅವರು ಹೆಚ್ಚಿನ ಜೀವಿತಾವಧಿಯಲ್ಲಿ ಬಾಳುವುದಕ್ಕೆ ಮತ್ತು ಮಾನಸಿಕವಾಗಿ ಸದೃಢರಾಗಿರಲು ಯೋಗ ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ನಾವೆರಲ್ಲರೂ ಸಹ ದಿನನಿತ್ಯ ಯೋಗ ಮಾಡುವುದನ್ನು ರೂಡಿಸಿಕೊಳ್ಳಬೇಕು ಎಂದರು.


ಬಳ್ಳಾರಿಯಲ್ಲಿ ಭಾನುವಾರದಂದು ಯೋಗ ಸಂಭ್ರಮದಲ್ಲಿ ಮಿಂದೆದ್ದಿತು. ನಗರದ ಕೊಳಗಲ್ ವಿಮಾನ ನಿಲ್ದಾಣದಲ್ಲಿ ನಡೆದ ಬೃಹತ್ ಯೋಗಾಥಾನ್ ದಾಖಲೆಯ ಕ್ಷಣಕ್ಕೆ ಸಾಕ್ಷಿಯಾಯಿತು.
ಯುವಕರಿಗಾಗಿ ಯೋಗ ಎಂಬ ಘೋಷವಾಕ್ಯದಡಿ ನಡೆದ ಬೃಹತ್ ಯೋಗಾಥಾನ್ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಪಾಲಿಕೆ ಸದಸ್ಯರಾದ ಶ್ರೀನಿವಾಸ ಮೋತ್ಕಾರ್, ಪಿ.ಗಾದೆಪ್ಪ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಡಿಸಿ ಮಂಜುನಾಥ, ತಹಶೀಲ್ದಾರ ವಿಶ್ವನಾಥ, ಯುವ ಸಬಲೀಕರಣ ಮತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹರಿಸಿಂಗ್ ರಾಥೋಡ್, ಜಿಲ್ಲಾ ಆಯುಷ್ಯ ಅಧಿಕಾರಿ ಸುಜಾತ ಪಾಟೀಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಂದಾನಪ್ಪ ವಡಗೇರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರೆಹಮತ್ ಉಲ್ಲಾ ಸೇರಿದಂತೆ ಅನೇಕರು ಯೋಗಾಭ್ಯಾಸ ಮಾಡಿದರು. ಇವರೊಂದಿಗೆ ಸಾವಿರಾರು ಜನರು ಯೋಗಾಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಭ್ಯಾಸ ಮಾಡಿದ್ದು, ವಿಶೇಷವಾಗಿತ್ತು.


ಚಳಿಯ ವಾತಾವರಣದ ನಡುವೆಯೇ ಬೆಳಗಿನ ಜಾವ 6 ಗಂಟೆಯಿಂದಲೇ ಯೋಗಾಭ್ಯಾಸಿಗಳು ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದು ವಿಶೇಷವಾಗಿತ್ತು. 20ಕ್ಕೂ ಹೆಚ್ಚು ಬಸ್‍ಗಳಲ್ಲಿ ಯೋಗಾಸಕ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಬಂದು ಯೋಗ ಮ್ಯಾಟ್‍ಗಳ ಮೇಲೆ ಕುಳಿತು ಯೋಗಾಭ್ಯಾಸ ಮಾಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು, ಮಧ್ಯವಯಸ್ಕರು ಸೇರಿದಂತೆ ವಿವಿಧ ವಯೋಮಾನದವರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು.


ಧ್ವನಿ ಸುರುಳಿಯ ಮೂಲಕ ವಿವಿಧ ಆಸನಗಳ ಮಹತ್ವ ತಿಳಿಸುತ್ತಾ ಪ್ರತಿ ಚೌಕ ವಿಭಾಗದ ಯೋಗಾಸಕ್ತರಿಗೆ ಒಬ್ಬರು ತರಬೇತುದಾರರು ಆಯೋಜಿಸಿದ್ದು, ಅವರು ಯೋಗಾಥಾನ್‍ಗಾಗಿ ಸಿದ್ದಪಡಿಸಿದ ನಿಯಮಾನುಸಾರ ಯೋಗಾಸನಗಳನ್ನು 45 ನಿಮಿಷಗಳ ಕಾಲ ನಡೆಸಿಕೊಟ್ಟರು. ಅದರಂತೆಯೇ ಯೋಗ ಮಾಡಿದರು.
ಅತ್ಯುತ್ತಮ ಯೋಗ ತರಬೇತಿ ಹೊಂದಿದ ಶಾಲಾ ಕಾಲೇಜುಗಳಿಗೆ ಪ್ರಮಾಣಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಡಿಸಿ ಮಂಜುನಾಥ, ಜಿಲ್ಲಾ ಆಯುಷ್ಯ ಅಧಿಕಾರಿ ಸುಜಾತ ಪಾಟೀಲ್, ಸೇರಿದಂತೆ ಬಳ್ಳಾರಿ ಜಿಲ್ಲೆಯ ವಿವಿಧ ಯೋಗಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here