BP NEWS: ಬಳ್ಳಾರಿ: ಜನೇವರಿ.26: ಗಣರಾಜ್ಯೋತ್ಸವದ ಅಂಗವಾಗಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ಸ್ಥಂಭದ ಬೃಹತ್ ಧ್ವಜಾರೋಹಣವನ್ನು ಗುರುವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಸ್ಪಿ ರಂಜೀತ್ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ಕುಮಾರ್, ಎಡಿಸಿ ಮಂಜುನಾಥ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.