ಬಳ್ಳಾರಿ: ಮಡಿವಾಳ ಮಾಚಿದೇವರ ಜಯಂತಿ ಆಚರಣೆ

0
143

BP NEWS: ಬಳ್ಳಾರಿ: ಫೆಬ್ರವರಿ.01: ಶರಣ ಮಡಿವಾಳ ಮಾಚಿದೇವರು 12ನೇ ಶತಮಾನದ ಶಿವಶರಣರಲ್ಲಿ ಬರುವ ಅವತಾರ ಪುರುಷರು. ಅವರ ವಚನ ಸಾಹಿತ್ಯದಿಂದ ಮೂಢನಂಬಿಕೆ, ಅಸಮಾನತೆ, ಜಾತಿ ನಿಂದನೆ, ಶೋಷಣೆ, ಸಮಾಜದಲ್ಲಿ ನಿತ್ಯ ಕಾಣುವ ತಲ್ಲಣಗಳ ಬಗ್ಗೆ ಪ್ರತಿಬಿಂಬಿಸಿದ ಶರಣರು ಎಂದು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದ ಪ್ರತಿಯೊಬ್ಬರೂ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನಿಷ್ಠಿ ರುದ್ರಪ್ಪ ಅವರು ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತಿ ಅಂಗವಾಗಿ ಮೆರವಣಿಗೆಗೆ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಹಾನಗರ ಪಾಲಿಕೆ ಮೇಯರ್ ಅವರು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಜಯಂತಿಯ ಮೆರವಣಿಗೆಯು ಮುನಿಸಿಪಲ್ ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ವಾಲ್ಮೀಕಿ ಭವನದ ವೇದಿಕೆ ಸಭಾಂಗಣದವರೆಗೆ ತಲುಪಿತು.
ಈ ಸಂದರ್ಭದಲ್ಲಿ ರಾಬಕೋವಿ ಜಿಲ್ಲಾ ಹಾಲು ಒಕ್ಕೂಟ ನಿಗಮದ ನಿರ್ದೇಶಕರಾದ ವೀರಶೇಖರ ರೆಡ್ಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ್, ಮಹಾನಗರ ಪಾಲಿಕೆ ಸದಸ್ಯ ಬಸವರಾಜ, ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷರಾದ ಎನ್.ಧನುಂಜಯ ಹಮಲ್, ಸಮಾಜದ ಮುಖಂಡರುಗಳಾದ ಹೊನ್ನೂರಪ್ಪ, ಮಲ್ಲೇಶಪ್ಪ, ಶೇಷಗಿರಿ ಸೇರಿದಂತೆ ಸಮಾಜ ಭಾಂದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here