BP NEWS: ಬಳ್ಳಾರಿ: ಫೆಬ್ರವರಿ.12: ನಗರದ ಶ್ರೀರಾಂಪುರ ಕಾಲೋನಿಯ ನಿವಾಸಿ ದಲಿತ ಮುಖಂಡರ ಹಾಗೂ ಬಿಜೆಪಿ ಜಿಲ್ಲಾ ಎಸ್ಸಿ ಘಟಕದ ಕಾರ್ಯದರ್ಶಿ ಯಾಗಿದ್ದ ಬಿ.ನರಸಿಂಹಲು ಅವರನ್ನು ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಗಾಲಿ ಜನಾರ್ಧನ ರೆಡ್ಡಿಯವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಅವರು ನೇಮಕ ಮಾಡದರು.
ದಲಿತಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ಬಿ.ನರಸಿಂಹಲು ಅವರನ್ನು ನೇಮಕ ಮಾಡಿದ್ದಕ್ಕೆ ದಲಿತ ಮುಖಂಡರು ಮತ್ತು ಅವರ ಬೆಂಬಲಿಗಲು ಸಂತಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಮಾದಿಗ ಸಮುದಾಯದ ನಿರ್ಣಾಯಕ ಪಾತ್ರವಹಿಸುತ್ತಿದ್ದು, ಮಾದಿಗ ಸಮುದಾಯದ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ್ದು ಯಾವ ರೀತಿ ಪರಿಣಾಮವನ್ನು ಬೀರುತ್ತೇ ಎನ್ನುವುದನ್ನು ಕಾದು ನೋಡಬೇಕಾಗಿದೆ.