ಬಳ್ಳಾರಿಯಲ್ಲಿ ಸಂಭ್ರಮದ ಛತ್ರಪತಿ ಶಿವಾಜಿ ಜಯಂತಿ ಆಚರಣೆ.

0
79

BP NEWS: ಬಳ್ಳಾರಿ: ಫೆಬ್ರವರಿ: 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಶ್ರೀ ಛತ್ರಪತಿ ಶಿವಾಜಿ ಜಯಂತಿಯನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಅವರ ಧೈರ್ಯ ಮತ್ತು ಸಾಹಸಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ವಿಠ್ಠಲ್‍ರಾವ್ ಗಾಯಕ್‍ವಾಡ್ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತಿಯ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಶ್ರೀ ಪಾಂಡುರಂಗಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಳ್ಳಾರಿ ನಗರ ಶಾಸಕರಾದ ಸೋಮಶೇಖರರೆಡ್ಡಿ ಅವರು ಶ್ರೀ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.


ಜಯಂತಿಯ ಮೆರವಣಿಗೆಯು ಶ್ರೀ ಪಾಂಡುರಂಗಸ್ವಾಮಿ ದೇವಸ್ಥಾನದಿಂದ ಆರಂಭವಾಗಿ ಕಾಳಮ್ಮ ಬೀದಿಯಿಂದ ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯ ಮೂಲಕ ಗಡಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮಕ್ಕೆ ಸಾಗಿತು.
ಮೆರವಣಿಗೆಯಲ್ಲಿ ಡೊಳ್ಳು, ತಾಷಾ ರಂಡೋಲ್ ಸೇರಿದಂತೆ ವಿವಿಧ ಕಲಾತಂಡಗಳಿಂದ ಸಮುದಾಯದ ಬಾಂಧವರು ಕುಣಿದು ಸಂಭ್ರಮಿಸಿದ್ದು ವಿಶೇಷವಾಗಿ ಕಂಡುಬಂತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್‍ಬಾಬು, ಹಿಂದೂ ಮತ್ತು ಧರ್ಮದಾಯಿ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಂ.ಹೆಚ್.ಪ್ರಕಾಶ್‍ರಾವ್ ಅವರು ಸೇರಿದಂತೆ ಸಮಾಜದ ಹಿರಿಯ ಮುಖಂಡರುಗಳು ಹಾಗೂ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here