ಜಿಲ್ಲಾಡಳಿತದಿಂದ ಸಂತಕವಿ ಶ್ರೀ ಸರ್ವಜ್ಞ ಜಯಂತಿ ಆಚರಣೆ

0
135

BP NEWS: ಬಳ್ಳಾರಿ: ಫೆಬ್ರವರಿ.20: ತ್ರಿಪದಿಗಳಲ್ಲಿಯೇ ವಚನ ಸಾಹಿತ್ಯ ಕಟ್ಟಿಕೊಟ್ಟ ವಚನಸಾಹಿತ್ಯಕಾರ. ತ್ರಿಪದಿಗಳ ಬ್ರಹ್ಮ ಸರ್ವಜ್ಞ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂತಕವಿ ಶ್ರೀ ಸರ್ವಜ್ಞ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವಜ್ಞನು ಕೇವಲ ಮೂರು ಸಾಲುಗಳಲ್ಲಿಯೇ ವಚನ ರಚಿಸಿ ಪ್ರಪಂಚದ ಅರಿವನ್ನು ಮೂಡಿಸುತ್ತಿದ್ದರು. ಆಡುಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಬರೆಯದ ವಚನಗಳಿಲ್ಲ ಎಂದು ನಾವು ಕಾಣಬಹುದು ಎಂದರು.
ಕಾರ್ಯಕ್ರಮದಲ್ಲಿ ಆಕಾಶವಾಣಿ ಎಫ್.ಎಂ. ಕೇಂದ್ರದ ಉದ್ಘೋಷಕರಾದ ಬಸವರಾಜ್ ಅಮಾತಿ ಅವರು ಸಂತಕವಿ ಶ್ರೀ ಸರ್ವಜ್ಞರ ವಚನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜನಸೈನ್ಯ ಸಂಘದ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗಸ್ವಾಮಿ, ಉಪಾಧ್ಯಕ್ಷ ಶ್ರೀನಿವಾಸ, ನರಸಯ್ಯ, ಸರ್ವೇಶ, ನಾಗೇಂದ್ರ ಸೇರಿದಂತೆ ಸಮಾಜದ ಹಿರಿಯ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here