5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕಾರ್ಯ

0
158

BP NEWS: ಬಳ್ಳಾರಿ,: ಮಾ.23: 2022-23ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13ರಿಂದ ಮಾ.18ರವರೆಗೆ ಮೌಲ್ಯಾಂಕನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಸಲು ನಿರ್ಧರಿಸಲಾಗಿತ್ತು.
ಉಚ್ಛ ನ್ಯಾಯಾಲಯದ ಸೂಚನೆಯ ಮೇರೆಗೆ 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27 ರಿಂದ 30 ರವರೆಗೆ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27 ರಿಂದ ಏ.1 ರವರೆಗೆ ಮಾಲ್ಯಾಂಕನವನ್ನು ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ.
5 ಮತ್ತು 8ನೇ ತರಗತಿಯ ಮೌಲ್ಯಾಂಕನ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ ಹಾಗೂ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ ಇದು ಕೇವಲ ಮೌಲ್ಯಾಂಕನವಾಗಿರುತ್ತದೆ.
ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಮೌಲ್ಯಾಂಕನ ಕೇಂದ್ರಗಳಾಗಿ ಪರಿಗಣಿಸಿದೆ. ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು, ಕಲಿಕಾ ಪ್ರಗತಿ ಹಾಗೂ ಯಾವ ವಿಷಯದ ಕಲಿಕೆಯಲ್ಲಿ ಎಷ್ಟು ಹಿನ್ನಡೆ ಉಂಟಾಗಿದೆ ಎಂಬುದನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ.
ಪರಿಷ್ಕøತ ವೇಳಾ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಮೌಲ್ಯಾಂಕನ ಫಲಿತಾಂಶವನ್ನು ಸಂಬಂಧಿಸಿದ ಪೆÇೀಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ, ಮೌಲ್ಯಗಳಲ್ಲಿ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here