BP NEWS: ಬಳ್ಳಾರಿ: ಏಪ್ರಿಲ್.23:
ವಿಶ್ವಗುರು ಬಸವೇಶ್ವರ ಜಯಂತಿ ಅಂಗವಾಗಿ ನಗರದ ಮೋತಿ ವೃತ್ತದ ಬಳಿಯಿರುವ ಬಸವಣ್ಣನವರ ಪುತ್ಥಳಿಗೆ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ವಿಶ್ವಗುರು ಬಸವಣ್ಣನವರ 890 ನೇ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ನಿಮಿತ್ತ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜೀತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ಬಾಬು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಇದ್ದರು.