ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀ. ವ್ಯಾಪ್ತಿ ನಿರ್ಬಂಧ ಘೋಷಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

0
126

BP NEWS: ಬಳ್ಳಾರಿ: ಜುಲೈ.27:
ಜಿಲ್ಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 27 ರಿಂದ ಆಗಸ್ಟ್ 04 ರವರೆಗೆ ನಗರದ 02 ಪರೀಕ್ಷಾ ಕೇಂದ್ರಗಳಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷೆ ನಡೆಯುವ ಕೇಂದ್ರಗಳಾದ ಕೌಲ್‍ಬಜಾರ್‍ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಥಿಯರಿ ಪರೀಕ್ಷೆ) ಹಾಗೂ ಕಪ್ಪಗಲ್ ರಸ್ತೆಯ ವಿಜಯಲಕ್ಷ್ಮಿ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆ ಸುತ್ತಲೂ 200 ಮೀಟರ್ ಒಳಗಿನ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್‍ಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 09 ರಿಂದ ಸಂಜೆ 05.30 ರವರೆಗೆ ಮುಚ್ಚುವಂತೆ ಆದೇಶಿದ್ದಾರೆ.
ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here