BP NEWS: ಬಳ್ಳಾರಿ: ಆಗಸ್ಟ್.03:
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭವು ಆ.05 ರಂದು ಬೆಳಿಗ್ಗೆ 11.30 ಕ್ಕೆ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸಮಾರಂಭವನ್ನು ಉದ್ಘಾಟಿಸುವರು ಮತ್ತು ಅಧ್ಯಕ್ಷತೆ ವಹಿಸುವರು.
ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಘನ ಉಪಸ್ಥಿತಿ ಇರುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ನಾರಾ ಭರತ್ ರೆಡ್ಡಿ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಂ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕಲಬುರಗಿ ಜೆಸ್ಕಾಂ ನ ವ್ಯವಸ್ಥಾಪಕ ನಿರ್ದೇಶಕರಾದ ಪಾಂಡ್ವೆ ರಾಹುಲ್ ತುಕಾರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಸೇರಿದಂತೆ ಬಳ್ಳಾರಿ ಜೆಸ್ಕಾಂ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರರ ವೆಂಕಟೇಶುಲು, ಬಳ್ಳಾರಿ ವಲಯ ಜೆಸ್ಕಾಂ ಮುಖ್ಯ ಅಭಿಯಂತರರ ಲಕ್ಷ್ಮಣ ಚವ್ಹಾಣ್, ಬಳ್ಳಾರಿ ನಗರ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಹುಸೇನ್‍ಸಾಬ್, ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರ ಜೆ.ರಂಗನಾಥಬಾಬು ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.