ಪಿಡಿಓಗಳೊಂದಿಗೆ ಜಿ.ಪಂ ಸಿಇಓ ಅವರ ಸಭೆ

0
104

BP NEWS: ಕೊಪ್ಪಳ: ಆಗಸ್ಟ್ .04: ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್- 04 ರಂದು ಜಿ.ಪಂ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಇದೆ ವೇಳೆ ಸಿಇಓ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಮಪರ್ಕವಾಗಿ ಕುಡಿಯುವ ನೀರು ಪೂರೈಕೆಯಾಗಬೆಕು. ಯಾವುದೇ ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ಕೂಡಲೇ ವಿಷಯವನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರವಾಗಿ ಅದನ್ನು ಸರಿಪಡಿಸಬೇಕು. ಈ ಹಿನ್ನೆಲೆಯಲ್ಲಿ ಪಿಡಿಓಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಗ್ರಾಮ ಪಂಚಾಯತನ ಕುಂದು ಕೊರತೆಗಳನ್ನು ತ್ವರಿತವಾಗಿ ಬಗೆಹರಿಸುವ ಹಿನ್ನೆಲೆಯಲ್ಲಿ ಎಲ್ಲಾ ಗ್ರಾ.ಪಂ.ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ಈ ಸಿಸಿ ಕ್ಯಾಮರಾಗಳ ಮಾನಿಟರಿಂಗ್ ಜಿ.ಪಂ ಕಾರ್ಯಾಲಯದಿಂದಲೇ ಮಾಡಲಾಗುವುದು ಎಂದರು.


15ನೇ ಹಣಕಾಸಿನಲ್ಲಿ ಪ್ರತಿ ಗ್ರಾಮ ಪಂಚಾಯತಗಳಲ್ಲಿ ಒಂದು ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ. ಬಿಕಾನ ಲೈಬ್ರರಿಗಳಲ್ಲಿ ವಿಶೇಷ ಚೇತನರ ಸ್ನೇಹಿ ಶೌಚಾಲಯ, ಕಲಿಕಾ ಸಮಾಗ್ರಿಗಳು, ಸೊಳ್ಳೆ ನೇಟ್, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆಗೆ ಕ್ರಮ ವಹಿಸಿ, ಈ ಮಾಹಿತಿಯನ್ನು ಪಂಚತಂತ್ರ ತಂತ್ರಾಂಶಯದಲ್ಲಿ ದಾಖಲಿಸಬೇಕು. ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಈಗಾಗಲೇ ಘಟಕ ನಿರ್ಮಿಸಲಾದ ಗ್ರಾಮ ಪಂಚಾಯತಗಳನ್ನು ಹೊರತು ಪಡಿಸಿ, ಉಳಿದ ಗ್ರಾ.ಪಂ.ಗಳಲ್ಲಿ ಎಸ್.ಡಬ್ಲ್ಯೂ.ಎಂ ಘಟಕ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನು ಗುರುತಿಸಬೇಕು ಎಂದು ಸಿಇಓ ಅವರು ಪಿಡಿಓಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ ಸೇರಿದಂತೆ ತಾ.ಪಂ ಕಾರ್ಯನಿರವಾಹಕ ಅಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here