ವಿಎಸ್‍ಕೆ ವಿವಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

0
69

BP NEWS: ಬಳ್ಳಾರಿ: ಆಗಸ್ಟ್.15:
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣಿಕೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ. ಸಾಹೇಬ್ ಅಲಿ ಹೆಚ್ ನಿರಗುಡಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.


ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಜಿ-20 ಪ್ರಾಯೋಜಕತ್ವ, ಸಾಂಸ್ಕøತಿಕ, ಶಿಕ್ಷಣ, ಕೃಷಿ, ತಂತ್ರಜ್ಞಾನ, ಕ್ಷೇತ್ರಗಳಲ್ಲಿ ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ. ರಾಷ್ಟ್ರಪತಿಗಳ ಆಶಯದಂತೆ ಸುಸ್ಥಿರ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದೆ. ಸಮಸ್ತ ನಾಗರಿಕರು ದೇಶದ ಗೌರವವನ್ನು ಕಾಪಾಡುವುದು ಮುಖ್ಯವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿವಿಯ ಇಂಗ್ಲೀಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಶಾಂತನಾಯ್ಕ್ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಅದಿವಾಸಿಗಳ ಕೊಡುಗೆಯು ಅಪಾರವಾಗಿದೆ. ಆದರೆ ಇತಿಹಾಸಕಾರರ ನಿರ್ಲಕ್ಷ್ಯದಿಂದ ಇವರುಗಳ ಹೆಸರುಗಳು ಮುನ್ನೆಲೆಗೆ ಬರಲಿಲ್ಲ ಎಂದರು. ದೇಶಪ್ರೇಮದ ಅಭಿವ್ಯಕ್ತಿ ಹಾಗೂ ದೇಶದ ಸಮಗ್ರತೆಯ ಅನಾವರಣಕ್ಕೆ ಸಾಕ್ಷಿಯಾಗಿದೆ. ಭವ್ಯ ಭಾರತ ನಿರ್ಮಾಣದಲ್ಲಿ ಯುವಕರ ಕೈಜೋಡಿಸಬೇಕು ಮತ್ತು ದೇಶ ಪ್ರೇಮ ಬೆಳೆಸಿಕೊಳ್ಳಬೇಕೆಂದು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ.ಸದ್ಯೋಜಾಥಪ್ಪ ಎಸ್, ಕ್ರೀಡಾ ವಿಭಾಗದ ಪ್ರಭಾರ ನಿರ್ದೇಶಕ ಡಾ.ಸಂಪತ್ ಕುಮಾರ, ಡಾ.ಶಶಿಧರ್ ಕೆಲ್ಲೂರ್, ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here