2.80 ಕೋಟಿ ರೂ.ವೆಚ್ಚದ ಎಪಿಎಂಸಿ ನೂತನ ಪೋಲೀಸ್ ಠಾಣೆ ಕಟ್ಟಡ ಉದ್ಘಾಟಿಸಿದ ಸಚಿವ ಬಿ.ನಾಗೇಂದ್ರ

0
76

BP NEWS: ಬಳ್ಳಾರಿ: ಆಗಸ್ಟ್.15:
ನಗರದ ಎಪಿಎಂಸಿ ಬಳಿಯ 2.80 ಕೋಟಿ ರೂ. ವೆಚ್ಚದ ನೂತನ ಪೊಲೀಸ್ ಠಾಣೆ ಕಟ್ಟಡವನ್ನು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಂಗಳವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಒಂದು ವಿಶೇಷ ಇಲಾಖೆಯಾಗಿದ್ದು, ಮಹತ್ವದ ಜವಾಬ್ದಾರಿ ನಿರ್ವಹಿಸುವ ಮೂಲಕ ತನ್ನದೇ ಆದ ವಿಶೇಷ ಗೌರವ ಹೊಂದಿದೆ. ಪೊಲೀಸ್ ಮತ್ತು ಸಾರ್ವಜನಿಕರು ಸಮಾಜದ ಹಿತಾಶಕ್ತಿ ಕಾಪಾಡುವಲ್ಲಿ ಇಬ್ಬರೂ ಹೊಂದಾಣಿಕೆಯಿಂದ ಇರಬೇಕು ಎಂದು ಹೇಳಿದರು.
ಪೊಲೀಸ್‍ಠಾಣೆಯು ಈ ಭಾಗದ ಜನರ ಬಹುಬೇಡಿಕೆಯಾಗಿದ್ದು, ಅದು ಈಗ ಈಡೇರಿದೆ. ಠಾಣೆಗಳಿಗೆ ಬಂದಂತಹ ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಬೇಗನೇ ಸ್ಪಂದಿಸಬೇಕು ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್‍ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಮಹಾನಗರ ಪಾಲಿಕೆ ಸದಸ್ಯೆ ಪದ್ಮಾರೋಜ, ಪೊಲೀಸ್ ಮಹಾನಿರೀಕ್ಷಕ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್‍ಕುಮಾರ್, ಎಡಿಸಿ ಮೊಹಮ್ಮದ್ ಜುಬೇರಾ, ಎಎಸ್ಪಿ ಎಂ.ಎ.ನಟರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here