BP NEWS: ಬಳ್ಳಾರಿ: ಸೆಪ್ಟೆಂಬರ್.02:
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲೆಯ 15 ಫಲಾನುಭವಿಗಳಿಗೆ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಜಿಪಂ ಆವರಣದಲ್ಲಿ ಕ್ರೀಡಾ ಸೈಕಲ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು. ತಮಗೆ ಸರ್ಕಾರದ ಸೌಲಭ್ಯದ ಅವಶ್ಯತೆಯಿದ್ದಲ್ಲಿ ನನಗೆ ಮನವಿ ಸಲ್ಲಿಸಿ ಎಂದರು.
ಕ್ರೀಡಾ ಇಲಾಖೆಯಿಂದ ಹಮ್ಮಿಕೊಂಡಿದ್ದ ವೀಲ್ ಚೇರ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಸೌಲಭ್ಯ ಪಡೆದುಕೊಂಡ 15 ಫಲಾನುಭವಿಗಳು ಗೆಲುವು ಸಾಧಿಸಿ ಪ್ಯಾರಾಲಂಪಿಕ್ಸ್ ಪಂದ್ಯಾವಳಿಗಳಿಗೆ ಆಯ್ಕೆಯಾಗಿರುವುದನ್ನು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದಾಗ, ಈ ಸಂದರ್ಭದಲ್ಲಿ ಸಚಿವರು ಕ್ರೀಡಾಪಟುಗಳನ್ನು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ವಿಶೇಷಚೇತನ ಹೆಣ್ಣು ಮಕ್ಕಳು ಸಚಿವರಿಗೆ ರಾಕಿ ಕಟ್ಟಿ, ರಕ್ಷಾ ಬಂಧನ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗ್ರೇಸಿ ಸೇರಿದಂತೆ ಇತರರು ಹಾಜರಿದ್ದರು.