ಶ್ರೀ ಕೃಷ್ಣ ಜಯಂತ್ಯೋತ್ಸವ ಸೆ.06 ರಂದು

0
87

BP NEWS: ಬಳ್ಳಾರಿ: ಸೆಪ್ಟೆಂಬರ್.05:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.06ರಂದು ಬೆಳಿಗ್ಗೆ 11 ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸೆ.06 ರಂದು ಬೆಳಿಗ್ಗೆ 09ಕ್ಕೆ ಕುಮಾರಸ್ವಾಮಿ ದೇವಸ್ಥಾನದ ಹತ್ತಿರದ ನಂದಗೋಕುಲ ಶಾಲಾ ಆವರಣದಲ್ಲಿ ಶ್ರೀ ಕೃಷ್ಣ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡುವರು. ನಂತರ ಬೆಳಿಗ್ಗೆ 11 ಕ್ಕೆ ವೇದಿಕೆ ಸಮಾರಂಭವನ್ನು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿರಲಿದ್ದಾರೆ.
ಮೆರವಣಿಗೆ ಕುಮಾರಸ್ವಾಮಿ ದೇವಸ್ಥಾನ ಹತ್ತಿರದ ನಂದಗೋಕುಲ ಶಾಲಾ ಆವರಣದಿಂದ ಆರಂಭವಾಗಿ ಎಸ್ ಪಿ ವೃತ್ತದ ಮೂಲಕ ಕನಕ ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಬಿಡಿಎಎ ಮೈದಾನದ ಸಭಾಂಗಣದವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here