ನೂತನ ಜಿಲ್ಲಾಡಳಿತ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

0
89

BP NEWS: ಬಳ್ಳಾರಿ: ಸೆಪ್ಟೆಂಬರ್.17:
ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಕಲ್ಯಾಣ ಕರ್ನಾಟಕ ಉತ್ಸವದ ಶುಭಾಶಯ ತಿಳಿಸಿದರು. ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ಚಳುವಳಿಯ ಸಂದೇಶ ನೀಡಿದರು.


ಬಳಿಕ ನೂತನ ಜಿಲ್ಲಾಡಳಿತ ಭವನದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ಅಬಕಾರಿ ಅಧೀಕ್ಷಕ ಎನ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ಭಾರತೀಯ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here